ಗ್ರಾ.ಪಂ.ವತಿಯಿಂದ 68ನೇ ಸ್ವಾತಂತ್ಯದಿನಾಚರಣೆಯನ್ನು ಪಟ್ಟಣದ ಎಂಪಿಎಸ್ ಶಾಲಾ ಆವರಣದಲ್ಲಿ ಶುಕ್ರವಾರದಂದು ಅದ್ಧೂರಿಯಾಗಿ ನಡೆಯಲಿದೆ.
ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಉಪತಹಸೀಲ್ದಾರ್ ಸತ್ಯನಾರಾಯಣ ಧ್ವಜಾರೋಹಣ ನೆರವೇರಿಸಲಿದ್ದು, ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯಅತಿಥಿಯಾಗಿ ಸಂಸದ ಮುದ್ದಹನುಮೇ ಗೌಡ, ಶಾಸಕ ಸಿ.ಬಿ.ಸುರೇಶ್ ಬಾಬು, ವಿಧಾನಪರಿಷತ್ ಸದಸ್ಯ ಹುಲಿನಾಯ್ಕರ್, ಜಿ.ಪಂ ಸದಸ್ಯೆ ಮಂಜುಳಾ, ತಾ.ಪಂ.ಅಧ್ಯಕ್ಷೆ ಲತಾ, ಉಪಾಧ್ಯಕ್ಷ ವಸಂತಯ್ಯ, ಮಾಜಿ ಶಾಸಕರುಗಳಾದ ಕೆ.ಎಸ್.ಕಿರಣ್ ಕುಮಾರ್, ಜೆ.ಸಿ.ಮಾಧುಸ್ವಾಮಿ,ಲಕ್ಕಪ್ಪ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಹಾಗೂ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ