ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪಠ್ಯ ಎಷ್ಟು ಮುಖ್ಯವೋ , ಪಠ್ಯೇತರ ಚಟುವಟಿಕೆಗಳು ಅಷ್ಟೇಮುಖ್ಯವಾಗಿದ್ದು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಿ ಎಂದು ಪ್ರಾಂಶುಪಾಲರಾದ ಡಿ.ದೇವಿರಮ್ಮ ಕಿವಿಮಾತು ಹೇಳಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಕಾಲೇಜಿನಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದ ಸ್ಫರ್ಧೆಯನ್ನು ಪ್ರಾಂಶುಪಾಲರಾದ ಡಿ.ದೇವಿರಮ್ಮ ಉದ್ಘಾಟಿಸಿದರು. |
ಹುಳಿಯಾರು-ಕೆಂಕೆರೆ ಬಿಎಂಎಸ್ ಸಕರ್ಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಸಹಯೋಗದಲ್ಲಿ ನಡೆದ ಅಂತರ ಕಾಲೇಜು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದ ಸ್ಫರ್ಧೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ತೋರ್ಪಡಿಸಬೇಕಿದೆ ಎಂದರು. ಶಾಲಾ-ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮನೋಭಾವ ಮೂಡುವಂತೆ ಮಾಡಬೇಕಿದೆ ಎಂದರು.
ಸ್ಪರ್ಧೆಯಲ್ಲಿ ವಿಜೇತರಾದವರು : ಭಾವಗೀತೆ ಗಾಯನದಲ್ಲಿ ಸಿತಾರಾ ಪ್ರಥಮ,ಮಾಲಾ ದ್ವಿತೀಯ ಸ್ಥಾನ ಪಡೆದರೆ ಭಕ್ತಿಗೀತೆ ಗಾಯನದಲ್ಲಿ ತನುಜಾ ಪ್ರಥಮ, ಗಂಗಾಮಣಿ ದ್ವಿತೀಯ ಸ್ಥಾನ ಹಾಗೂ ಜನಪದಗೀತೆ ಗಾಯನದಲ್ಲಿ ತನುಜಾ ಎಚ್.ಎಸ್. ಪ್ರಥಮ , ಶ್ವೇತ ದ್ವಿತೀಯ ಸ್ಥಾನಗಳಿಸಿದ್ದಾರೆ.
ಉಪನ್ಯಾಸಕರಾದ ಶಂಕರಲಿಂಗಯ್ಯ,ಅಶೋಕ್,ಶಿವಯ್ಯ,ಹನುಮಂತಪ್ಪ,ಶ್ರೀನಿವಾಸಪ್ಪ, ಯತೀಶ್, ಉಮೇಶ್ ಸೇರಿದಂತೆ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ