ವಿಷಯಕ್ಕೆ ಹೋಗಿ

ಬಾಣಂತಿ ಸಾವು : ವೈದ್ಯರ ವಿರುದ್ದ ಗ್ರಾಮಸ್ಥರ ಆಕ್ರೋಶ - ನರ್ಸಿಂಗ್ ಹೋಂ ನಲ್ಲೇ ಶವವಿಟ್ಟು ಪ್ರತಿಭಟನೆ

            ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ದಬ್ಬಗುಂಟೆಯ ಗ್ರಾಮಸ್ಥರು ಹಾಗೂ ಆಕೆಯ ಕುಟುಂಬದವರು ಗುರುವಾರ ಮಧ್ಯಾಹ್ನ ಪಟ್ಟಣದ ಸ್ಪಂದನ ನರ್ಸಿಂಗ್ ಹೋ ನಲ್ಲಿ ಬಾಣಂತಿಯ ಶವವಿಟ್ಟು ಪ್ರತಿಭಟಿಸಿದ್ದಾರೆ.
ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ನರ್ಸಿಂಗ್ ಹೋಂ ಮುಂದೆ ಗ್ರಾಮಸ್ಥರು ಜಮಾಯಿಸಿರುವುದು.

           ವಿವರ: ಸೌಂದರ್ಯ (20) ಎಂಬಾಕೆಯನ್ನು ಹೆರಿಗೆಂದು ಕಳೆದ 6 ರ ಬುಧವಾರ ರಾತ್ರಿ ಹತ್ತಿರದ ದಬ್ಬಗುಂಟೆ ಗ್ರಾಮದಿಂದ ಪಟ್ಟಣದ ಸ್ಪಂದನ ನರ್ಸಿಂಗ್ ಹೋಂ ಗೆ ಕರೆತರಲಾಗಿತ್ತು . ಹೆರಿಗೆ ನೋವುಬಾರದೆ ಹೆರಿಗೆ ಮಾಡುವುದಿಲ್ಲ ಎಂದು ಹೇಳಿದ ವೈದ್ಯರು ಗುರುವಾರ ಬೆಳಗಿನ ಜಾವ ಶಸ್ತ್ರಚಿಕಿತ್ಸೆ ಮೂಲಕ ಡಿಲಿವರಿ ಮಾಡಿ, ಹೆಣ್ಣುಮಗು ಹಾಗೂ ಬಾಣಂತಿಯನ್ನು ಆರು ದಿನಗಳಕಾಲ ನರ್ಸಿಂಗ್ ಹೋಂ ನಲ್ಲಿ ಇರಬೇಕೆಂದು ಹೇಳಿ ದಾಖಲು ಮಾಡಿಕೊಂಡು ಚಿಕಿತ್ಸೆ ಮುಂದುವರಿಸಿದ್ದಾರೆ. ಆದರೆ ಮೂರ್ನಾಲ್ಕು ದಿನದ ತರುವಾರ ಬಾಣಂತಿಗೆ ಸ್ಪಲ್ಪ ಕೆಮ್ಮು ಕಾಣಿಸಿಕೊಂಡಾಗ ಕಫಕಟ್ಟಿಕೊಂಡಿದೆ ಇದೇನು ಸಮಸ್ಯೆಯಲ್ಲ ಎಂದು ಹೇಳಿದ್ದಾರೆ. ಆದರೆ ನಿನ್ನೆ ಬುಧವಾರ ಬೆಳಿಗ್ಗೆ ಆಕೆಯ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಕೂಡಲೇ ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿ ಖುದ್ದಾಗೆ ತಾವೆ ಅಂಬ್ಯೂಲೆನ್ಸ್ ವ್ಯವಸ್ಥೆ ಮಾಡಿ ಬೆಂಗಳೂರಿಗೆ ಕಳುಹಿಸಿದ್ದಾರೆ. ವಾಣಿವಿಲಾಸ ಆಸ್ಪತ್ರೆಯಲ್ಲಿ ಈಗಾಗಲೇ ತಡವಾಗಿದೆ ಎಂದು ವಾಪಸ್ಸ್ ಕಳುಹಿಸಿದ್ದರಿಂದ ಕೂಡಲೇ ದಾಸರಹಳ್ಳಿ ಖಾಸಗಿ ನರ್ಸಿಂಗ್ ಹೋಂಗೆ ದಾಖಲು ಮಾಡಿತಾದರೂ ಮುಂಜಾನೆ ವೇಳೆಗೆ ಬಾಣಂತಿ ಅಸುನೀಗಿದ್ದಾರೆ.
         ಅಳಲು : ಮಗುವನ್ನು ಬಿಟ್ಟು ಮಡಿದ ಬಾಣಂತಿಯ ಸಾವಿಗೆ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು. ಚಿಕಿತ್ಸೆ ಸಾಧ್ಯವಿಲ್ಲವೆಂದು ಮುಂಚಿತವಾಗಿ ತಿಳಿಸಿದ್ದಲ್ಲಿ ಹೇಗಾದರು ಮಾಡಿ ಬದುಕಿಸಿಕೊಳ್ಳುತ್ತಿದ್ದೆವು. ಚಿಕಿತ್ಸೆಗೆ ನಿರ್ಲಕ್ಷ ತೋರಿದ ವೈದ್ಯರೇ ನನ್ನ ಮಗಳ ಸಾವಿಗೆ ಕಾರಣ ಎಂದು ಬಾಣಂತಿಯ ತಾಯಿ ಉಮಾದೇವಿ ಹಾಗೂ ಪತಿ ಮುನಿರಾಜ್ ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದ ದೃಶ್ಯ ಮನಕರಗುವಂತಿತ್ತು .
ಬಾಣಂತಿ ಸಾವಿಗೆ ಹುಳಿಯಾರಿನ ನರ್ಸಿಂಗ್ ಹೋಂ ನ ವೈದ್ಯರ ನಿರ್ಲಕ್ಷವೇ ಕಾರಣವೆಂದು ನರ್ಸಿಂಗ್ ಹೋಂ ಗೆ ಮತ್ತೆ ಬಾಣಂತಿ ಶವ ತಂದಿಟ್ಟಿರುವುದು.

        ಆಕ್ರೋಶ : ಬಾಣಂತಿಗೆ ಸರಿಯಾಗಿ ಚಿಕಿತ್ಸೆ ನೀಡದೆ ಸುಮ್ಮನೆ ಹಣದಾಸೆಗಾಗಿ ಆಕೆಯನ್ನು ನರ್ಸಿಂಗ್ ಹೋಂನಲ್ಲಿ ಆಡ್ಮಿಟ್ ಮಾಡಿಕೊಂಡು ಕೊನೆಗಳಿಗೆಯಲ್ಲಿ ಈ ರೀತಿ ಬೇರೆಡೆಗೆ ಕಳುಹಿಸಿರುವುದು ವೈದ್ಯರ ಬೇಜವಬ್ದಾರಿಯನ್ನು ತೋರಿಸುತ್ತದೆ .ಈ ಸಾವಿಗೆ ನರ್ಸಿಂಗ್ ಹೋಂ ನ ವೈದ್ಯರೇ ಕಾರಣರಾಗಿದ್ದು ಅದರ ಹೊಣೆಯನ್ನು ಅವರೆ ಹೊರಬೇಕು ಹಾಗೂ ನಮಗೆ ನ್ಯಾಯ ಸಿಗಬೇಕೆಂದು ಬಾಣಂತಿಯ ಕುಟುಂಬದವರು ಸೇರಿದಂತೆ ಗ್ರಾಮಸ್ಥರು ಪಟ್ಟು ಹಿಡಿದು ನರ್ಸಿಂಗ್ ಹೋಂ ಒಳಗೆ ಬಾಣಂತಿಯ ಶವವನಿಟ್ಟು ಪ್ರತಿಭಟಿಸಿದರು.

           ಇಷ್ಟೆಲ್ಲಾ ನಡೆಯುತ್ತಿದ್ದರೂ ಸಹ ನರ್ಸಿಂಗ್ ಹೋಂ ವೈದ್ಯರು ಬಾರದೆ ಜವಬ್ದಾರಿ ಉತ್ತರ ನೀಡುವವರೂ ಕಾಣದಿದ್ದು ಪ್ರತಿಭಟನಾಕಾರರನ್ನು ಕೆರಳುವಂತೆ ಮಾಡಿತ್ತು , ಸಂಜೆಯಾದರೂ ಗ್ರಾಮಸ್ಥರು ಅಲ್ಲಿಂದ ಕದಲದೆ ಅಲ್ಲೇ ಮೊಕ್ಕಾಂ ಹೂಡಿದ್ದು , ಗ್ರಾಮಗಳಿಂದ ತಂಡವಾಗಿ ಜನರು ಬರುತ್ತಲೇ ಇದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು ಹೆಚ್ಚಿನ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ನರ್ಸಿಂಗ್ ಹೋಂನ ಸುತ್ತಾ ಬಿಗಿ ಪೊಲೀಸ್ ಪಹರೆಯನ್ನು ಹಾಕಲಾಗಿದ್ದು , ಸಂಜೆಯಾದರೂ ಶವವನ್ನು ನರ್ಸಿಂಗ್ ಹೋಂ ನಲ್ಲೇ ಬಿಡಲಾಗಿದ್ದು ಪರಿಸ್ಥಿತಿ ಬಿಗಡಾಯಿಸಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...