ಶೈಕ್ಷಣಿಕ ಪ್ರಗತಿಗೆ ಪಾಠವು ಎಷ್ಟು ಮುಖ್ಯವೋ ಅಂತೆಯೇ ಕ್ರೀಡೆಯೂ ಅಷ್ಟೇ ಮುಖ್ಯವಾಗಿದ್ದು, ಮಕ್ಕಳು ಆಟೋಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಆಟಗಳನ್ನು ಆಡುವುದರಿಂದ ಅವರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ ಎಂದು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸುಧಾ ತಿಳಿಸಿದರು.
ಹುಳಿಯಾರಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆವತಿಯಿಂದ ಪಟ್ಟಣದ ಎಂಪಿಎಸ್ ಶಾಲಾ ಆವರಣದಲ್ಲಿ ಸೋಮವಾರ ಆರಂಭವಾದ ಪ್ರಾಥಮಿಕ ಶಾಲೆಗಳ "ಎ" ವಿಭಾಗದ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹುಳಿಯಾರಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯವರು ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ "ಎ" ವಿಭಾಗದ ಕ್ರೀಡಾಕೂಟವನ್ನು ಸಂಸ್ಥೆಯ ಕಾರ್ಯದರ್ಶಿ ಸುಧಾ ಉದ್ಘಾಟಿಸಿದರು. |
ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳು ಏನು ಕಲಿಯುತ್ತಾರೆ ಅದನ್ನೇ ಅವರು ಮುಂದಿನ ಶಾಲಾ ಹಂತದಲ್ಲಿ ಮುನ್ನಡೆಸಿಕೊಂಡು ಹೋಗುತ್ತಾರೆ.ಈ ಹಿನ್ನಲೆಯಲ್ಲಿ ಪ್ರಾಥಮಿಕ ಹಂತದಲ್ಲೇ ಮಕ್ಕಳ ಆಸಕ್ತಿಗನುಗುಣವಾಗಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಬಗ್ಗೆ ಹೆಚ್ಚು ಉತ್ಸಾಹ ಮೂಡುವಂತೆ ಶಿಕ್ಷಕರು ಮಾಡಬೇಕಿದೆ ಎಂದರು. ಕ್ರೀಡೆಯಲ್ಲಿ ಸೋಲುಗೆಲವು ಇದ್ದು ಪ್ರತಿಯೊಬ್ಬ ಕ್ರೀಡಾಪಟುವೂ ಆಟದ ಬಗ್ಗೆ ದೃತಿಗೆಡದೆ ಧೈರ್ಯದಿಂದ ಆಡುವಂತೆ ತಿಳಿಸಿದರು.
ಹುಳಿಯಾರು ಎಂಪಿಎಸ್ ಶಾಲಾವರಣದಲ್ಲಿ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯವರು ಆಯೋಜಿಸಿದ್ದ ಪ್ರಾಥಮಿಕಶಾಲೆಗಳ "ಎ"ವಿಭಾಗದ ಹೋಬಳಿಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಧ್ವಜವಂದನೆ ಸಲ್ಲಿಸಿದರು. |
ಕ್ರೀಡಾಕೂಟದ ಜ್ಯೋತಿ ಸ್ವೀಕರಿಸಿದ ತಾಲ್ಲೂಕು ದೈಹಿಕ ಪರಿವೀಕ್ಷಕ ನರಸಿಂಹಮೂರ್ತಿ ಮಾತನಾಡಿ, ಪ್ರತಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಒಂದಲ್ಲ ಒಂದು ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಆ ಶಾಲೆಯ ದೈಹಿಕ ಹಾಗೂ ಸಹಶಿಕ್ಷಕರು ಉತ್ತೇಜಿಸಬೇಕು ಎಂದರು. ಹುಳಿಯಾರು ಹೋಬಳಿಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಗ್ರಾಮೀಣಭಾಗದವರಾಗಿದ್ದರೂ ಸಹ ಪ್ರತಿಭಾವಂತರಾಗಿದ್ದಾರೆ ಎಂದು ಶ್ಲಾಘಿಸಿದರು. ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಸಿ.ಶಿವಣ್ಣ ಅಧ್ಯಕ್ಷತೆವಹಿಸಿದ್ದು, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ್ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಎಂಪಿಎಸ್ ಶಾಲೆಯ ಮುಖ್ಯಶಿಕ್ಷಕ ನಂದವಾಡಗಿ ಸೇರಿದಂತೆ ವಿವಿಧ ಶಾಲೆಗಳ ದೈಹಿಕ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದ ಕ್ರೀಡಾಕೂಟದಲ್ಲಿ ಜ್ಞಾನಜ್ಯೋತಿ ಶಾಲೆಯ ಮುಖ್ಯಶಿಕ್ಷಕ ಸಿದ್ರಾಮಯ್ಯ ಸ್ವಾಗತಿಸಿ, ಬಸವರಾಜು ನಿರೂಪಿಸಿ,ಗಂಗಾಧರ್ ವಂದಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ