ಹುಳಿಯಾರು ಹೋಬಳಿ ಜೋಡಿತಿರುಮಲಾಪುರದ ಲಕ್ಷ್ಮಿವೆಂಕಟೇಶ್ವರ ದೇವಾಲಯದಲ್ಲಿ ಎರಡನೇ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು.
ಶನಿವಾರ ಮುಂಜಾನೆಯಿಂದ ಸ್ವಾಮಿಗೆ ಪಂಚಾಮೃತಾಭಿಷೇಕ, ರುದ್ರಾಭಿಷೇಕ ಹಾಗೂ ಅರ್ಚನೆ ಸೇರಿದಂತೆ ವಿವಿಧ ಪೂಜಾಕೈಂಕರ್ಯಗಳು ನಡೆಯಿತು. ಅಪಾರ ಸಂಖ್ಯೆಯ ಭಕ್ತಾಧಿಗಳು ಆಗಮಿಸಿ ಪೂಜೆಸಲ್ಲಿಸುವ ಮೂಲಕ ಸ್ವಾಮಿಯ ಕೃಪಾಶೀರ್ವಾದ ಪಡೆದರು. ಆಗಮಿಸಿದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ನರಹರಿಶಾಸ್ತ್ರಿ, ಲಕ್ಷ್ಮಿನರಸಿಂಹಯ್ಯ,ರಾಜಣ್ಣ, ನಾಗರಾಜು,ರಾಘವೇಂದ್ರ, ಮಂಜುನಾಥ, ಕೃಷ್ಣಮೂರ್ತಿ, ರಾಧಾಕೃಷ್ಣ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ