ವಿಷಯಕ್ಕೆ ಹೋಗಿ

ಬೆಂಗಳೂರು ಬಸ್ ಗಳು ರಶೋ.......ರಶ್

             ಹುಳಿಯಾರು  ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಜನಜಂಗುಳಿಯೇ ಸೇರಿತ್ತು. ಅವರೆಲ್ಲಾ ಹಬ್ಬ ಮುಗಿಸಿ ವಾಪಸ್ಸ್ ಬೆಂಗಳೂರಿಗೆ ಹೋಗಲು ಹೊರಟು ನಿಂತವರಾಗಿದ್ದರು. ಬೆಂಗಳೂರು ಕಡೆ ಹೋಗಲು ಯಾವ ಬಸ್ ಬಂದರೂ ಸಹ ಅವೆಲ್ಲಾ ಪುಲ್ ರಶ್ ಆಗಿ ಕಾಲಿಡುವುದಕ್ಕು ಆಸ್ಪದವಿರಲಿಲ್ಲ.
ಹುಳಿಯಾರು ಬಸ್ ನಿಲ್ದಾಣಕ್ಕೆ ಬಂದ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹತ್ತಲು ಮುಗಿಬೀಳುತ್ತಿರುವ ಪ್ರಯಾಣಿಕರು.
                 ಹುಳಿಯಾರು ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಸಾಕಷ್ಟು ಮಂದಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವವರೇ ಆಗಿದ್ದು ಗೌರಿ-ಗಣೇಶ ಹಬ್ಬಕ್ಕೆಂದು ತಂತಮ್ಮ ಊರುಗಳಿಗೆ ಬಂದಿದ್ದರು. ಹಬ್ಬ ಹಾಗೂ ಭಾನುವಾರದ ರಜೆ ಮುಗಿಸಿ ಸೋಮವಾರದಂದು ವಾಪಸ್ಸ್ ಕೆಲಸಕ್ಕೆ ಹಾಜರಾಗಲು ಬಸ್ ನಲ್ಲಿ ತೆರಳಲು ಬಂದಿದ್ದರಿಂದ ಬೆಳಿಗ್ಗೆ ನಾಲ್ಕು ಗಂಟೆಯಿಂದಲೇ ಬಸ್ ನಿಲ್ದಾಣ ಗಿಜುಗುಟ್ಟುತ್ತಿತ್ತು. ಎಲ್ಲಾ ಬಸ್ಸುಗಳು ಹೊಸದುರ್ಗದಿಂದ ಬರುತ್ತಿದ್ದವಾದ್ದರಿಂದ ಹುಳಿಯಾರಿಗೆ ಬರುವಷ್ಟರಲ್ಲೇ ಬಸ್ ಸೀಟ್ ಗಳೆಲ್ಲಾ ತುಂಬಿದ್ದು ಪ್ರಯಾಣಿಕರು ಪರದಾಡುವಂತಾಗಿತ್ತು. ಬರುತ್ತಿದ್ದ ಬಸ್ ಗೆ ಒಮ್ಮೆಲೆ ಎಲ್ಲಾ ಪ್ರಯಾಣಿಕರು ನುಗ್ಗುತ್ತಿದ್ದರಿಂದ ಬಸ್ ಹತ್ತುವುದೆ ತ್ರಾಸದಾಯಕವಾಗಿತ್ತು. ಸರ್ಕಾರಿ ಬಸ್ ಜೊತೆಗೆ ಇಂದು ಹೆಚ್ಚುವರಿಯಾಗಿ ಖಾಸಗಿ ಬಸ್ ಗಳು ಸಂಚರಿಸಿದ್ದರೂ ಕೂಡ ಎಲ್ಲಾ ಬಸ್ ಗಳು ಪುಲ್ ರಶ್ ಆಗಿದ್ದು ನಿಂತುಕೊಂಡು ಹೋಗಲು ಕೂಡ ಆಗದಷ್ಟು ಕಿಕ್ಕಿರಿದು  ಪ್ರಯಾಣಿಕರು ತುಂಬಿದ್ದರು. ಇದರಿಂದ ಬೆಂಗಳುರಿಗೆ ಹೋಗುವುದು ಬಲು ಪ್ರಯಾಸವಾಗಿಬಿಟ್ಟಿತ್ತು.
                  ಬಸ್,ಲಾರಿ,ಕಾರು ಸೇರಿದಂತೆ ಯಾವುದೇ ವಾಹನ ಬಂದರೂ ಸರಿ ಪ್ರಯಾಣಿಸಲು ತಯಾರಿದ್ದ ಜನರಿಂದ ಖಾಸಗಿ ಬಸ್ ನವರು ಇದೇ ಸಮಯವೆಂದು ಮಾಮೂಲಿ 110 ರೂ ಬದಲಿಗೆ 150 ರೂ ನಂತೆ ಹೆಚ್ಚುವರಿಯಾಗಿ ಹಣವಸೂಲಿ ಮಾಡುತ್ತಿದ್ದರು ಸಹ ಇದ್ಯಾವುದರ ಬಗ್ಗೆ ತಲೆಕೆಡಿಸಿಕೊಳ್ಳದ ಜನ ಹೇಗಾದರೂ ಸರಿ ಬೆಂಗಳುರು ತಲುಪಬೇಕೆಂದು ಧಾವಂತದಲ್ಲಿದ್ದರು.

            ಒಟ್ಟಾರೆ ಪ್ರತಿ ವರ್ಷ ಗೌರಿ ಗಣೇಶ ಹಬ್ಬ ಹಾಗೂ ಆಯುಧ ಪೂಜೆ ಸಮಯದಲ್ಲಿ ಪ್ರಯಾಣಿಕ ಈ ಸಮಸ್ಯೆ ಬಗ್ಗೆ ಸಾರಿಗೆ ಇಲಾಖೆಯವರಿಗೆ ಅರಿವಿದ್ದರು ಸಹ ಹೆಚ್ಚುವರಿ ಬಸ್ ಗಳನ್ನು ಬಿಡದೆ ಇರುವುದು ಪ್ರಯಾಣಿಕರಲ್ಲಿ ಇಲಾಖೆಯ ಕಾರ್ಯವೈಖರಿ ಬಗ್ಗೆ ಹರಿಹಾಯುತ್ತಿದ್ದರು .ಇನ್ನಾದರೂ ಸಾರಿಗೆ ಇಲಾಖೆಯವರು ಹಬ್ಬದ ಸಮಯದಲ್ಲಾದರೂ ಬೆಂಗಳೂರು - ಹುಳಿಯಾರು ವಿಶೇಷ ಬಸ್ ಗಳನ್ನು ಬಿಟ್ಟರೆ ಈ ಭಾಗದಕ್ಕೆ ಜನಕ್ಕೆ ಹೆಚ್ಚು ಅನುಕೂಲಕರವಾಗಲಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...