ಹುಳಿಯಾರು ಸಮೀಪದ ಹೊಸಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಮಕ್ಕಳಿಗಾಗಿ ಪೌಷ್ಠಿಕ ಆಹಾರ ಕುರಿತು ಸಪ್ತಾಹ ಕಾರ್ಯಕ್ರಮಕ್ಕೆ ತಾ.ಪಂ.ಸದಸ್ಯ ಜಯಣ್ಣ ಶುಕ್ರವಾರ ಚಾಲನೆ ನೀಡಿದರು.
ಹುಳಿಯಾರು ಸಮೀಪದ ಹೊಸಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಕುರಿತು ಸಪ್ತಾಹ ಕಾರ್ಯಕ್ರಮಕ್ಕೆ ತಾ.ಪಂ.ಸದಸ್ಯ ಜಯಣ್ಣ ಚಾಲನೆ ನೀಡಿದರು |
ಆರೋಗ್ಯ ಇಲಾಖೆಯ ಮೇಲ್ವಿಚಾರಕಿ ಲಕ್ಷ್ಮಮ್ಮ ಮಾತನಾಡಿ , ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ಥಳೀಯವಾಗಿ, ಸುಲಭವಾಗಿ ಸಿಗುವಂತ ಪೌಷ್ಠಿಕಾಂಶಯುಕ್ತ ಹಸಿರುಸೊಪ್ಪು, ತರಕಾರಿ, ಧಾನ್ಯಗಳು,ಹಣ್ಣುಗಳ ಬಳಕೆಯ ಬಗ್ಗೆ ತಿಳಿಸಿದರು.ಅಲ್ಲದೆ ಜೀವಸತ್ವಗಳ ಕೊರತೆಯಿಂದ ಉಂಟಾಗುವ ಕಾಯಿಲೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಗ್ರಾ.ಪಂ.ಅಧ್ಯಕ್ಷೆ ಭಾಗ್ಯಮ್ಮ,ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ ಹಾಗೂ ಮತ್ತಿಘಟ್ಟ ಎರಡನೇ ವೃತ್ತದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳು,ಪೋಷಕರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ