ನಾಡು ಕಂಡಂತ ಅತ್ಯಂತ ತಜ್ಞ ಹಾಗೂ ದೂರದೃಷ್ಠಿಯುಳ್ಳ ಇಂಜಿನಿಯರ್ ಆಗಿದ್ದ ಎಸ್.ಎಂ.ವಿ ಅವರ ವಿಚಾರಧಾರೆ ಹಾಗೂ ಸಾಧನೆಗಳು ಇಂದಿನ ಯುವಪೀಳಿಗೆಗೆ ಅನುಕರಣೀಯ ಎಂದು ಪ್ರಾಂಶುಪಾಲ ನಟರಾಜ್ ತಿಳಿಸಿದರು.
ಹುಳಿಯಾರು-ಕೆಂಕೆರೆ ಸರ್ಕಾರಿ ಪಿಯು ಕಾಲೇಜಿನ ಎನ್.ಎಸ್.ಎಸ್.ಘಟಕದವತಿಯಿಂದ ಸೋಮವಾರ ಅಯೋಜಿಸಿದ್ದ ಎರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಇದರ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ವಿಶ್ವೇಶ್ವರಯ್ಯ ಅವರನ್ನು ಕುರಿತು ಭಾಷಣ ಸ್ಪರ್ಧೆ ಏರ್ಪಡಿಸಿ ಸರ್.ಎಂ.ವಿ ಬಗ್ಗೆ ಉತ್ತಮ ವಿಚಾರಗಳನ್ನು ಮಂಡಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ದ್ವಿತೀಯ ಪಿಯುಸಿ ಅರ್ಪಿತ ಪ್ರಥಮ ಸ್ಥಾನ ಹಾಗೂ ಪ್ರಥಮ ಪಿಯುಸಿ ಕಮಲ ದ್ವಿತೀಯ ಸ್ಥಾನ ಪಡೆದರು. ಪ್ರಾಂಶುಪಾಲ ನಟರಾಜ್ ಬಹುಮಾನ ವಿತರಿಸಿದರು. ಎನ್.ಎಸ್.ಎಸ್.ಯೋಜನಾಧಿಕಾರಿ ಯೋಗೀಶ್, ಉಪನ್ಯಾಸಕರಾದ ಶಿವರುದ್ರಯ್ಯ,ಗಿರೀಶ್,ರೇವಣ್ಣ,ಜಯಣ್ಣ ಸೇರಿದಂತೆ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ