ವಿಷಯಕ್ಕೆ ಹೋಗಿ

ಎನ್.ಎಸ್.ಎಸ್.ನಿಂದ ನಾಯಕತ್ವ ಗುಣ ಮೂಡುತ್ತದೆ : ಶಿಬಿರಾಧಿಕಾರಿ ಯೋಗೀಶ್

            ಗಾಂಧೀಜಿಯವರ ಕನಸಿನ ಕೂಸಾಗಿರುವ ರಾಷ್ಟ್ರೀಯ ಸ್ವಯಂ ಸೇವಾ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಸ್ವ ಪ್ರೇರಣೆಯಿಂದ ತೊಡಗಿಕೊಂಡು ಸೇವೆ ಮಾಡಲು ಮುಂದಾಗುವುದರಿಂದ ಪ್ರತಿಯೊಬ್ಬರಲ್ಲೂ ನಾಯಕತ್ವ ಗುಣ ಬೆಳೆಯುತ್ತದೆ ಎಂದು ಎನ್ನೆಸ್ಸಸ್ ಅಧಿಕಾರಿ ಯೋಗೀಶ್ ತಿಳಿಸಿದರು.
           ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಎನ್.ಎಸ್.ಎಸ್. ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ರಾಷ್ಟ್ರೀಯ ಸ್ವಯಂ ಸೇವಾ ಸಂಘ ಹಾಗೂ ಶಿಬಿರಗಳನ್ನು ಕುರಿತಂತೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಎನ್.ಎಸ್.ಎಸ್. ಘಟಕದ ಉದ್ಘಾಟನಾ ಸಮಾರಂಭದಲ್ಲಿ ಶಿಬಿರಾಧಿಕಾರಿ ಯೋಗೀಶ್ ಎನ್ನೆಸ್ಸಸ್ ಶಿಬಿರಗಳನ್ನು ಕುರಿತಂತೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.
           ಗ್ರಾಮೀಣ ಭಾಗಗಳ ಅಭಿವೃದ್ದಿಯ ನಿಟ್ಟಿನಲ್ಲಿ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಚೊಕ್ಕವಾಗಿಟ್ಟು ಕೊಳ್ಳುವ ಉದ್ದೇಶದಿಂದ ಗಾಂಧಿಜೀಯವರು ಈ ಸಂಘ ಸ್ಥಾಪಿಸಿ ಪ್ರತಿ ಹಳ್ಳಿಗಳಲ್ಲಿಗೆ ಶಿಬಿರಗಳನ್ನು ನಿಯೋಜಿಸುವ ಮೂಲಕ ಹಳ್ಳಿಗಳನ್ನು ಅನೈರ್ಮಲ್ಯ ಮುಕ್ತವಾಗಿಡಲು ಮುಂದಾಗಿದ್ದರು. ಅಂದು ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ಸಾಗಬೇಕಿದೆ ಎಂದರು
             ಸ್ವಚ್ಚತೆ, ಪರಿಸರ ಸಂರಕ್ಷಣೆ ಹಾಗೂ ನಮ್ಮ ಪರಂಪರೆಯನ್ನು ರಕ್ಷಿಸುವುದೇ ಎನ್ನೆಸ್ಸಸ್ ನ ಮೂಲ ಉದ್ದೇಶವಾಗಿದ್ದು, 1969 ರಲ್ಲಿ ಪ್ರಾಯೋಗಿಕವಾಗಿ ಪದವಿ ಹಂತದ ಕಾಲೇಜುಗಳಲ್ಲಿ ಆರಂಭವಾಗಿ ನಂತರ 1982 ರಲ್ಲಿ ಪಿಯು ಹಂತದ ಕಾಲೇಜುಗಳಲ್ಲೂ ಸಹ ಇದರ ಘಟಕಗಳು ಸ್ಥಾಪನೆಯಾದವು. ಅಂದಿನಿಂದ ಇದುವರೆಗೂ 3600 ಕಾಲೇಜುಗಳಲ್ಲಿ 800 ಸ್ವಯಂ ಸೇವಕ ಸಂಘಗಳು ಸ್ಥಾಪನೆಯಾಗಿ ಎಂಭತ್ತು ಸಾವಿರಕ್ಕೂ ಅಧಿಕ ಸ್ವಯಂಸೇವಕರಿದ್ದು ಸೇವೆ ಮಾಡಲು ಮುಂದಾಗಿದ್ದಾರೆ ಎಂದರು.
        ಎನ್ನೆಸ್ಸಸ್ ನ ಕಾರ್ಯಗಳು ; ಈ ಶಿಬಿರಗಳಲ್ಲಿ ಸೇರುವುದರಿಂದ ನಾವೆಲ್ಲಾ ಒಂದೇ ಎಂಬ ವಿಶಾಲ ಮನೋಭಾವ ಮೂಡಿ ಜಾತೀಯತೆ ನಿರ್ಮೂಲನೆಯಾಗುವುದರ ಜೊತೆಗೆ ಸರಳತೆ, ಪ್ರಾಮಾಣಿಕತೆಯಂತಹ ಸದ್ಗುಣಗಳು ಮೂಡುತ್ತವೆ. ಶಿಬಿರದಲ್ಲಿ ಮುಖ್ಯವಾಗಿ ಗ್ರಾಮಗಳಲ್ಲಿ ಸಸಿ ನೆಡುವ ಕಾರ್ಯ, ಚರಂಡಿಗಳನ್ನು ಸ್ವಚ್ಚಗೊಳಿಸುವುದು, ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದು, ನೀರಿನ ಸದ್ಬಳಕೆಯ ಬಗ್ಗೆ ತಿಳಿಸುವುದು, ಅಂತರ್ಜಲ ವೃದ್ದಿಯ ಬಗ್ಗೆ ತಿಳಿಸುವುದು,ಸಾಕ್ಷರತೆಯ ಅರಿವು, ಸಹಕಾರ,ಸಹಬಾಳ್ವೆ ಬಗ್ಗೆ ಅರಿವು, ಸಾಮಾಜಿಕ ಒಡನಾಟಗಳ ಬಗ್ಗೆ ಗ್ರಾಮೀಣಬಾಗದ ಜನರಿಗೆ ತಿಳಿಸುವ ಕಾರ್ಯಗಳನ್ನು ಎನ್ನೆಸ್ಸಸ್ ನಿಂದ ಮಾಡಬಹುದಾಗಿದೆ ಎಂದರು.
             ಎನ್.ಎಸ್.ಎಸ್ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಸೇರಿಕೊಂಡಾಗ ಮಾತ್ರ ನಾವು ಕೈಗೊಳ್ಳುವ ಕಾರ್ಯದಲ್ಲಿ ಯಶಸ್ಸು ಲಭಿಸುತ್ತದೆ, ದೇಶ ಅಭಿವೃದ್ದಿಯಾಗಬೇಕೆಂದರೆ ಗ್ರಾಮಗಳು ಅಭಿವೃದ್ದಿಯಾಗಬೇಕು ಎಂಬುದನ್ನು ಕಾಲೇಜಿನ ವಿದ್ಯಾರ್ಥಿಗಳು ಅರಿತು ಶಿಬಿರದಲ್ಲಿ ಪಾಲ್ಗೊಂಡು ತಮ್ಮಿಂದಾಗುವ ಸೇವೆಯನ್ನು ಮಾಡಲು ಮುಂದಾಗಿ ಇದರಿಂದ ಮುಂದಿ ಉತ್ತಮ ಭವಿಷ್ಯ ರೂಪಗೊಳ್ಳಲಿದೆ ಎಂದರು .

            ಕಾರ್ಯಕ್ರಮದಲ್ಲಿ ಶಾಸಕ ಸಿ.ಬಿ.ಸುರೇಶ್ ಬಾಬು, ಪ್ರಾಂಶುಪಾಲ ನಟರಾಜ್, ಜಿ.ಪಂ.ಸದಸ್ಯೆ ಮಂಜುಳಾ , ಹೈಸ್ಕೂಲ್ ವಿಭಾಗದ ಉಪಪ್ರಾಂಶುಪಾಲೆ ಇಂದಿರಾ,ನಿವೃತ್ತ ಶಿಕ್ಷಕ ಕಲ್ಲೇಶ್, ಸಿಎಸ್ ಪುರ ಪಿಯು ಕಾಲೇಜಿನ ಪ್ರಾಂಶುಪಾಲ ಹೆಚ್.ಎನ್.ನರಸಿಂಹಮೂರ್ತಿ ಸೇರಿದಂತೆ ಉಪನ್ಯಾಸಕರು,ಸಿಬ್ಬಂದಿಯವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...