ವಿಷಯಕ್ಕೆ ಹೋಗಿ

ಉದ್ಯೋಗ ಖಾತ್ರಿ ಹಣ ಮಂಜೂರು ಮಾಡಿ : ನವೀನ್

            ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಚಿನಾಹಳ್ಳಿ ತಾಲ್ಲೂಕಿನಾದ್ಯತಂತ ಚೆಕ್ ಡ್ಯಾಂ, ಅಣೆ,ಹುದಿಬದುಗಳ ನಿರ್ಮಾಣ ಸೇರಿದಂತೆ ಇನ್ನಿತರ ಸಾಕಷ್ಟು ಕಾಮಗಾರಿಗಳು ಮುಗಿದು ತಿಂಗಳುಗಳು ಕಳೆದಿದ್ದರೂ ಸಹ ಕಾಮಗಾರಿಗೆ ವ್ಯಯಮಾಡಿದ ಹಣ ಮಾತ್ರ ಸಂದಾಯವಾಗಿಲ್ಲ ,ಇನ್ನಾದರೂ ಆ ಹಣವನ್ನು ಸಂದಾಯ ಮಾಡಿ ಎಂದು ತಾ.ಪಂ.ಮಾಜಿ ಅಧ್ಯಕ್ಷ ಕೆಂಕೆರೆ ನವೀನ್ ಒತ್ತಾಯಿಸಿದ್ದಾರೆ.
ಹುಳಿಯಾರು ಸುತ್ತಮುತ್ತ ಉದ್ಯೋಗಖಾತ್ರಿಯೊಜನೆಯಡಿ ನಿರ್ಮಿಸಿರುವ ಚೆಕ್ ಡ್ಯಾಂ ನಲ್ಲಿ ಮಳೆ ನೀರು ಶೇಖರಣೆಯಾಗಿರುವುದನ್ನು ಇಓ ಕೃಷ್ಣಮೂರ್ತಿ ಅವರಿಗೆ ತೋರಿಸುತ್ತಿರುವ ತಾ.ಪಂ.ಸದಸ್ಯ ನವೀನ್ ಹಾಗೂ ಗ್ರಾ.ಪಂ.ಸದಸ್ಯ ರಂಗನಾಥ್.
              ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಭಾಗದ ಜನರಿಗೆ ವರದಾನವಾಗಿದ್ದು ಇದರಡಿ ಅನೇಕ ಅಭಿವೃದ್ದಿ ಕಾರ್ಯಗಳಾಗಿದ್ದು ಜೊತೆಗೆ ಗ್ರಾಮೀಣ ಭಾಗದ ಜನಕ್ಕೆ ಕೆಲಸ ಸಹ ಲಭಿಸಿದ್ದು ಅವರ ಜೀವನ ನಿರ್ವಹಣೆಗೆ ಸಹಕಾರಿಯಾಗಿತ್ತು. ಯೋಜನೆಯಡಿ ಕಳೆದ 2013ರ ನವಂಬರ್ , ಡಿಸೆಂಬರ್ ತಿಂಗಳಲ್ಲೇ ಮುಗಿದಿರುವ ಕಾಮಗಾರಿಳಿಗೆ ತಗುಲಿದ ಹಣವನ್ನು ಸಹ ಮಂಜೂರು ಮಾಡದೆ ಸತಾಯಿಸುತ್ತಿರುವುದರಿಂದ ಈ ಬಾರಿಯ ಯಾವುದೇ ಯೋಜನೆಗಳನ್ನು ಕೈಗೊಳ್ಳಲು ಯಾರು ಮುಂದಾಗುತ್ತಿಲ್ಲ ಎಂದರು.
                 ತಾಲ್ಲೂಕಿನಾದ್ಯಂತ 30 ಕೋಟಿಯಷ್ಟು ಕಾಮಗಾರಿಯಾಗಿದ್ದು , 10 ಕೋಟಿಯಷ್ಟು ಹಣ ಬರಬೇಕಿದೆ. ಕೋಟ್ಯಾಂತರೂ ವೆಚ್ಚದಲ್ಲಿ ಕಾಮಗಾರಿಗಳು ನಡೆದಿದ್ದರೂ ಸಹ ಹೆಚ್ಚಿನ ಹಣ ಸರ್ಕಾರದ ಬಳಿಯೇ ಉಳಿದಿದೆ , ಕಾಮಗಾರಿ ಮಾಡಲು ಹಾಕಿದ್ದ ಬಂಡವಾಳದ ಹಣವೂ ಬಂದಿಲ್ಲ ಹಾಗಾಗಿ ಈ ಸಾಲಿನ ಕಾಮಗಾರಿಗಳನ್ನು ಮಾಡಿಸಲು ಯಾರೂ ಮುಂದಾಗುತ್ತಿಲ್ಲ ಎಂದರು.
             ಈಗಾಗಲೇ ಆಗಿರುವ ಕಾಮಗಾರಿಗಳಲ್ಲಿ ಲೋಪಗಳಿದ್ದರೆ ಅವುಗಳನ್ನು ಅಧಿಕಾರಿಗಳು ಖುದ್ದು ಪರಿಶೀಲಿಸಿ ಗುಣಮಟ್ಟದ ಕಾಮಗಾರಿ ಮಾಡಿರುವುವರಿಗೆ ಶೀಘ್ರವೇ ಹಣ ಮಂಜೂರು ಮಾಡಲಿ .ಕಳೆದ ಕೆಲ ದಿನಗಳಿಂದ ಹುಳಿಯಾರು ಹಾಗೂ ಸುತ್ತಮುತ್ತ ಉತ್ತಮ ಮಳೆಯಾಗಿದ್ದು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿದ್ದ ಚೆಕ್ ಡ್ಯಾಂ,ಪಿಕಪ್ ಗಳು,ಒಡ್ಡುಗಳಲ್ಲಿ ಹೆಚ್ಚು ನೀರು ಶೇಖರಣೆಯಾಗಿದ್ದು ಭೂಮಿಯ ಅಂತರ್ಜಲ ಹೆಚ್ಚಳಕ್ಕೆ ಕಾರಣವಾಗಿದೆ. ಅಲ್ಲದೆ ಯಾವುದೇ ಕಾಮಗಾರಿಗಳು ಶಿಥಿಲವಾಗಿಲ್ಲ ಅದರೂ ಸಹ ಸರ್ಕಾರ ಇದುವರೆಗೂ ಹಣ ಬಿಡುಗಡೆ ಮಾಡದೆ ಮೀನಾಮೇಷ ಎಣಿಸುತ್ತಿರುವುದೇಕೆಂದು ಪ್ರಶ್ನಿಸಿದ್ದಾರೆ.

           ವೀಕ್ಷಣೆ : ಈಗಾಗಲೇ ಹುಳಿಯಾರು ಭಾಗದಲ್ಲಿ ಮಳೆಯಿಂದಾಗಿ ನೀರು ಶೇಖರಣೆಯಾಗಿರುವ ಪಿಕಪ್,ಚೆಕ್ ಡ್ಯಾಂ ಸೇರಿದಂತೆ ಇನ್ನಿತ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣವಾಗಿರುವ ಕಾಮಗಾರಿಗಳ ಬಳಿ ಇಓ ಕೃಷ್ಣಮೂರ್ತಿ ಅವರನ್ನು ಕರೆದುಕೊಂಡು ಹೋಗಿ ಪರಿಶೀಲಿಸಿದ್ದು ಗುಣಮಟ್ಟದ ಬಗ್ಗೆ ಸಾಕ್ಷಿಕರಿಸಲಾಗಿದೆ. ಈಗಲಾದರೂ ಹಣ ಬಿಡುಗಡೆ ಮಾಡಿ ಖಾತ್ರಿಯೋಜನೆಯನ್ನು ಇನ್ನಷ್ಟು ಮುನ್ನಡೆಯುವಂತೆ ಮಾಡಲಿ ಎಂದು ಆಗ್ರಹಿಸಿದರು.
ಖಾತ್ರಿಯೋಜನೆಯಲ್ಲಿ ಕೆಲವೆಡೆ ಆಕ್ರಮ ನಡೆದಿದ್ದು ಅಂತಹದರ ಬಗ್ಗೆ ತನಿಖೆ ನಡೆದು ಕ್ರಮ ಕೈಗೊಳ್ಳಲ್ಲಿ , ಅದು ಬಿಟ್ಟು ಸೂಕ್ತವಾಗಿ ಕಾಮಗಾರಿ ಮಾಡಿರುವವರ ಬಿಲ್ ಪಾವತಿಸದಿರುವುದು ಯೋಜನೆ ಬಗ್ಗೆ ಜನರಲ್ಲಿ ನಿರಾಸಕ್ತಿ ಉಂಟುಮಾಡಿದೆ : ಧನುಷ್ ರಂಗನಾಥ್, ಹುಳಿಯಾರು.ಗ್ರಾ.ಪಂ.ಸದಸ್ಯ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...