ಶಾಲೆಯಲ್ಲಿನ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಸಹ ಒಂದಲ್ಲ ಒಂದು ಸುಪ್ತವಾದ ಪ್ರತಿಭೆ ಇರುತ್ತದೆ . ಅಂತಹ ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ ಎಂದು ಉಪಪ್ರಾಂಶುಪಾಲೆ ಡಿ.ಇಂದಿರಾ ತಿಳಿಸಿದರು.
ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಹೋಬಳಿ ಮಟ್ಟದ "ಎ"ವಿಭಾಗದ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿರು.
![]() |
| ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಹೋಬಳಿ ಮಟ್ಟದ "ಎ"ವಿಭಾಗದ ಪ್ರತಿಭಾಕಾರಂಜಿ ಕಾರ್ಯಕ್ರಮವನ್ನು ಗ್ರಾ.ಪಂ.ಉಪಾಧ್ಯಕ್ಷೆ ಅಬಿದುನ್ನಿಸಾ ಉದ್ಘಾಟಿಸಿದರು. |
ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಪ್ರತಿಭಾ ಕಾರಂಜಿಯಂತಹ ಹಲವಾರು ಯೋಜನೆಗಳನ್ನು ರೂಪಿಸಿ ಶಾಲಾ ಹಂತದಲ್ಲಿ ಇವುಗಳನ್ನು ಜಾರಿ ಮಾಡಿರುವುದಲ್ಲದೆ ಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡಿದ್ದು ಅವುಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು. ಸ್ಪರ್ಧೆಯಲ್ಲಿ ಬಹುಮಾನ ಸಿಗುತ್ತದೆಯೋ , ಇಲ್ಲವೋ ಅನ್ನುವುದಕ್ಕಿಂತ ಭಾಗವಹಿಸುವುದು ಮುಖ್ಯ, ಪ್ರತಿಯೊಬ್ಬರು ಸಹ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ತಮ್ಮಲ್ಲಿನ ಪ್ರತಿಭೆಯನ್ನು ಹೊರಹಾಕುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಎಸ್ಡಿಎಂಸಿ ಉಪಾಧ್ಯಕ್ಷ ರಂಗನಕೆರೆ ಮಹೇಶ್ ಮಾತನಾಡಿ, ಪ್ರತಿಭಾಕಾರಂಜಿ ಕಾರ್ಯಕ್ರಮ ಇಂದು ನೆನ್ನೆಯದಲ್ಲ , ಮಕ್ಕಳ ಶ್ರೇಯೋಭಿವೃದ್ದಿಯ ದೃಷ್ಠಿಯಿಂದ ಇದನ್ನು ಸರ್ಕಾರ ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಇಂತಹ ಸ್ಪರ್ಧೆಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಕ್ಷೀಣಿಸುತ್ತಿರುವುದು ವಿಷಾದನೀಯ ಎಂದರು. ಪ್ರತಿಭಾಕಾರಂಜಿಯಲ್ಲಿ ಮಕ್ಕಳು ಹೆಚ್ಚಾಗಿ ಜಾನಪದಸಾಹಿತ್ಯ ಒಳಗೊಂಡ ನೃತ್ಯ,ಹಾಡು ಸೇರಿದಂತೆ ಇತರೆ ಕ್ರಿಯಾತ್ಮಕ ಚಟುವಟಿಕೆಗಳನ್ನು ಮಾಡುವ ಮೂಲಕ ಜಾನಪದಸಾಹಿತ್ಯವನ್ನು ಉಳಿಸಿಬೆಳೆಸಿ ಎಂದರು. ಸಮೂಹ ಮಾಧ್ಯಮಗಳನ್ನು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಬಳಸಿಕೊಳ್ಳುವಂತೆ ಕಿವಿಮಾತು ಹೇಳಿದರು.
ಮುಖಂಡ ಜಲಾಲ್ ಸಾಬ್ ಮಾತನಾಡಿ ಇಂದಿನ ವಿದ್ಯಾರ್ಥಿಗಳು ಮೊಬೈಲ್, ಇಂಟರ್ ನೆಟ್, ಟಿ.ವಿ ಯ ದಾಸರಾಗುತ್ತಿದ್ದು, ಇದರಿಂದ ಅನುಕೂಲಕ್ಕಿಂತ ದುಷ್ಪರಿಣಾಮವೇ ಹೆಚ್ಚು ಎಂದು ಎಚ್ಚರಿಸಿದರು. ಗ್ರಾ.ಪಂ.ಉಪಾಧ್ಯಕ್ಷೆ ಅಬಿದುನ್ನಿಸಾ ಕಾರ್ಯಕ್ರಮ ಉದ್ಘಾಟಿಸಿದರು. ಸದಸ್ಯ ರಿಯಾಜ್ ಅಹಮದ್,ಸಿ.ಆರ್.ಪಿ ಗಳಾದ ಫರ್ನಾಭಿ, ಉಮೇಶ್ ಸೇರಿದಂತೆ ಸ್ಪರ್ಧೆಗೆ ಆಗಮಿಸಿದ್ದ ಒಟ್ಟು 6 ಶಾಲೆಯ ಮಕ್ಕಳು, ಶಿಕ್ಷಕರು,ತೀರ್ಪುಗಾರರು ಉಪಸ್ಥಿತರಿದ್ದು, ದೈಹಿಕ ಶಿಕ್ಷಕ ಮನ್ಸೂರ್ ಅಹಮದ್ ಸ್ವಾಗತಿಸಿ,ನಿರೂಪಿಸಿ, ವಿಜ್ಞಾನ ಶಿಕ್ಷಕಿ ವಿದ್ಯಾಕುಂಚನೂರು ವಂದಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ