ಕೃಷಿ ಇಲಾಖೆವತಿಯಿಂದ ಭೂಚೇತನ ಯೋಜನೆಯಡಿ ಹುಳಿಯಾರು ಹೋಬಳಿ ಮಟ್ಟದ ತರಬೇತಿ ಕಾರ್ಯಕ್ರಮ (ತಾ.18) ಗುರುವಾರ ಬೆಳಿಗ್ಗೆ 11 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ದೊರೆಯುವ ಸೌಲಭ್ಯ , ಕೃಷಿ ಚಟುವಟಿಕೆಗೆ ಸಂಬಂಧಿಸಿದ ಮಾಹಿತಿ ಹಾಗೂ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಗಳು ಸೇರಿದಂತೆ ಮತ್ತಿತರ ಮಾಹಿತಿಗಳನ್ನೊಳಗೊಂಡಂತೆ ತರಬೇತಿ ನೀಡಲಿದ್ದಾರೆ. ಕೃಷಿ ಭಾಗ್ಯ ಯೋಜನೆಯಡಿ ಸೌಲಭ್ಯ ಪಡೆಯಲು ಕನಿಷ್ಠ 2.5 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರುವವರು ಪಹಣಿ ತಂದು ಅರ್ಜಿಸಲ್ಲಿಸಬಹುದಾಗಿದೆ .ಹುಳಿಯಾರು ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ರೈತರು ಹಾಗೂ ರೈತ ಅನುವುಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ನೂರುಲ್ಲಾ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ