ಹುಳಿಯಾರು ಪಟ್ಟಣದ ವಾಸವಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿಗಳಾದ ಸುಹಾಸ್ ಹಾಗೂ ಭರತ್ ಖೋಖೋ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಖೋಖೋ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಾಸವಿ ಶಾಲೆಯ 7 ನೇತರಗತಿಯ ಭರತ್ ಹಾಗೂ ಸುಹಾಸ್. |
ಇವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ವಿಭಾಗೀಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಖೋಖೋ ಪಂದ್ಯಾವಳಿಯಲ್ಲಿ ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದಿದ್ದು, ಇದೇ ತಿಂಗಳ 19 ಮತ್ತು 20 ರಂದು ಗೋಕಾಕ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಆಡಲು ತೆರಳಲಿದ್ದಾರೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ವಾಸವಿ ವಿದ್ಯಾಸಂಸ್ಥೆಯವರು ಹಾಗೂ ಶಿಕ್ಷಕ , ಸಿಬ್ಬಂದಿವರ್ಗದವರು ಅಭಿನಂದಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ