ಪಟ್ಟಣ ಸೇರಿದಂತೆ ಯಾಕೂಬ್ ಸಾಬ್ ಪಾಳ್ಯ , ಬಳ್ಳೆಕಟ್ಟೆ,ಕಂಪನಹಳ್ಳಿ,ಯಗಚಿಹಳ್ಳಿ, ಗಾಣಾಧಾಳು ಮುಂತಾದೆಡೆ ಮುಸ್ಲಿ ಬಾಂಧವರು ಬಕ್ರೀದ್ ಹಬ್ಬವನ್ನು ಸೋಮವಾರದಂದು ಶ್ರದ್ಧಾ, ಭಕ್ತಿಯಿಂದ ಆಚರಿಸಿದರು.
ಬಕ್ರೀದ್ ಹಬ್ಬದ ಅಂಗವಾಗಿ ಪಟ್ಟಣದ ಈದ್ಗಾಮೈದಾನದಲ್ಲಿ ಧರ್ಮಗುರುಗಳು ಧಾರ್ಮಿಕ ಬೋಧನೆ ಮಾಡಿದರು. |
ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಮುಂಜಾನೆಯೇ ಜಾಮಿಯಾ, ನೂರಾನಿ, ಮದೀನಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿ ನಂತರ ಈದ್ಗಾಮೈದಾನದಲ್ಲಿಗೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮ ಗುರುಗಳಾದ ಮೌಲಾನ ಹಜರತ್ ಆಸೀಫ್ ಅವರ ಧಾರ್ಮಿಕ ಭೋದನೆಯಲ್ಲಿ ಹಬ್ಬದ ಸಂದೇಶ ನೀಡಿ ಬಕ್ರೀದ್ ಹಬ್ಬದ ಆಚರಣೆ ಹಾಗೂ ದಾನ ಧರ್ಮದ ಮಹತ್ವ ಕುರಿತು ತಿಳಿಸಿದರು.ಈ ಸಂದರ್ಭದಲ್ಲಿ ಜಾಮಿಯಾ ಮಸೀದಿಯ ಮುತುವಲ್ಲಿ ಜಬೀಉಲ್ಲಾ, ನೂರಾನಿ ಮಸೀದಿಯ ಮುತುವಲ್ಲಿ ಬೈಜು ಸಾಬ್, ಮುಸ್ಲಿಂ ಸಮುದಾಯದ ಮುಖಂಡರುಗಳು ಸೇರಿದಂತೆ ಅಪಾರ ಸಂಖ್ಯೆಯ ಮುಸ್ಲಿಂಬಾಂಧವರು ಉಪಸ್ಥಿತರಿದ್ದರು.
ಪ್ರಮುಖ ಬೀದಿಯಲ್ಲಿ ಮೆರವಣಿಗೆಯೊಂದಿಗೆ ಸಾಗಿದ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಬಂಧುಗಳು ಒಬ್ಬರಿಗೊಬ್ಬರು ಅಪ್ಪಿಕೊಳ್ಳುವ ಮೂಲಕ ಹಬ್ಬದ ಶುಭಾಷಯ ವಿನಿಮಯಮಾಡಿಕೊಂಡರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ