ಗಾಂಧಿಜೀಯವರ ಜನ್ಮ ದಿನವಾದ ಅಕ್ಟೋಬರ್ 2 ರಂದು ಸ್ವಚ್ಚ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರಮೋದಿ ಕರೆ ನೀಡಿರುವ ಹಿನ್ನಲೆಯಲ್ಲಿ ಪಟ್ಟಣದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯ ಮಕ್ಕಳಿಂದ ಹುಳಿಯಾರಿನ ಬಸ್ ನಿಲ್ದಾಣದಲ್ಲಿ ಸ್ವಚ್ಚತಾ ಆಂದೋಲನಕ್ಕೆ ಶ್ರಮದಾನ ನಡೆಯಲಿದೆ.
ಮುಂಜಾನೆಯಿಂದ ಸಂಜೆಯವರೆಗೆ ಬಸ್ ನಿಲ್ದಾಣದ ಹಳ್ಳಕೊಳ್ಳಗಳ್ಳಗಳನ್ನು ಮುಚ್ಚಿ,ಚರಂಡಿಗಳಲ್ಲಿ ತುಂಬಿರುವ ಕಸಕಡ್ಡಿಗಳನ್ನು ತೆಗೆದು ಸ್ವಚ್ಚತೆ ಮಾಡುವುದಲ್ಲದೆ , ಮಳೆ ಬಂದಾಗ ನೀರು ನಿಲ್ಲದಂತೆ ಹರಿದುಹೋಗುವ ವ್ಯವಸ್ಥೆ ಮಾಡುವುದು. ಇದೇ ಸಮಯದಲ್ಲಿ ಸ್ವಚ್ಚ ಭಾರತದ ಪರಿಕಲ್ಪನೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಸಂಸ್ಥೆಯ ಕಾರ್ಯದರ್ಶಿ ಕವಿತಾ ಕಿರಣ್ ಕುಮಾರ್ ತಿಳಿಸಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರೂ ಸಹ ಕೈಜೋಡಿಸುವ ಮೂಲಕ ಸ್ವಚ್ಚತಾ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ