ಹುಳಿಯಾರು ಹೋಬಳಿ ಕೆಂಕೆರೆಯ ಈಶ್ವರನಗುಡಿಯಲ್ಲಿ ಭಾನುವಾರ ಸಂಜೆ ಅಪಾರ ಸಂಖ್ಯೆಯ ಭಕ್ತಾಧಿಗಳ ಸಮ್ಮುಖದಲ್ಲಿ ಕಾರ್ತಿಕ ಮಹೋತ್ಸವ ನಡೆಯಿತು.
ಕಾರ್ತಿಕೋತ್ಸವದ ಅಂಗವಾಗಿ ಭಾನುವಾರ ಮುಂಜಾನೆ ಶಿವಲಿಂಗಕ್ಕೆ ಅಭಿಷೇಕ, ಬಿಲ್ವಾರ್ಚನೆ ನಡೆಸಿ, ಸಂಜೆ ವೇಳೆಗೆ ಸ್ವಾಮಿಯನ್ನು ಅಲಂಕರಿಸಲಾಯಿತು. ದೇವಾಲಯದ ಆವರಣದಲ್ಲಿ ಸಾಲು ದೀಪಗಳನ್ನು ಹಚ್ಚಿ ಮಹಾಮಂಗಳಾರತಿ ನಡೆಸಿ, ಕಾರ್ತಿಕ ಮಾಸದ ಪ್ರಾರಂಭದಲ್ಲಿ ದೇವಾಲಯದ ಮುಂಭಾಗ ಏರಿಸಿದ್ದ ದೀಪ ಇಳಿಸಿದರು. ಗ್ರಾಮದ ಹಾಗೂ ಸುತ್ತಮುತ್ತಲಿನ ಹಳ್ಳಿಯ ಅಪಾರ ಸಂಖ್ಯೆ ಭಕ್ತರು ಆಗಮಿಸಿದ್ದು ಸ್ವಾಮಿ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ಆಗಮಿಸಿದ್ದ ಭಕ್ತರಿಗಾಗಿ ಅನ್ನಸಂತರ್ಪಣೆಯನ್ನು ನಡೆಸಲಾಯಿತು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ