ಹುಳಿಯಾರು ಹೋಬಳಿ ಜೋಡಿತಿರುಮಲಾಪುರದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಕಾರ್ತಿಕ ಅಮವಾಸ್ಯೆ ಅಂಗವಾಗಿ ವಿಶೇಷ ಪೂಜೆ ನಡೆಸಲಾಯಿತು.
ಟಿ.ಎಸ್.ಮಂಜುನಾಥ ಶರ್ಮ ಅವರ ನೇತೃತ್ವದಲ್ಲಿ ಶ್ರೀಕಂಠಶಾಸ್ತ್ರಿ, ರಾಘವೇಂದ್ರ, ಕೃಷ್ಣಮೂರ್ತಿ, ಸತೀಶ್, ರವಿ ಅವರುಗಳ ಪೌರೋಹಿತ್ಯದಲ್ಲಿ ಸ್ವಾಮಿಗೆ ಪಂಚಾಮೃತಾಭಿಷೇಕ, ಬಿಲ್ವಾರ್ಚನೆ, ರುದ್ರಾಭಿಷೇಕ, ಮಹಾನ್ಯಾಸ ಪೂರಕ ಸೇವೆ ನಡೆಯಿತು. ಮಹಾಮಂಗಳಾರತಿಯ ನಂತರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಈ ವೇಳೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದು ಪೂಜೆಸಲ್ಲಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ