ವಿಷಯಕ್ಕೆ ಹೋಗಿ

ವಿವಿಧ ಇಲಾಖಾ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ರೈತಸಂಘ

 ರೈತರಿಗೆ ಹಾಗೂ ಸಾರ್ವಜನಿಕರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಒತ್ತಾಯಿಸಿ ಪುಟ್ಟಣ್ಣಯ್ಯ ಬಣದ ರೈತ ಸಂಘದ ಪದಾಧಿಕಾರಿಗಳು ಪಟ್ಟಣದ ವಿವಿಧ ಇಲಾಖೆಗಳಿಗೆ ತೆರಳಿ ಚುರುಕು ಮುಟ್ಟಿಸಿದ ಪ್ರಸಂಗ ಬುಧವಾರ ನಡೆಯಿತು.
 ಹುಳಿಯಾರು ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ತಾಲ್ಲೂಕು ಅಧ್ಯಕ್ಷ ಹೊಸಳ್ಳಿ ಚಂದ್ರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಸಿದರು
ಪಟ್ಟಣದ ಪರಿವೀಕ್ಷಣ ಮಂದಿರಲ್ಲಿ ತಾಲ್ಲೂಕು ಅಧ್ಯಕ್ಷ ಹೊಸಳ್ಳಿ ಚಂದ್ರಪ್ಪ ಅವರ ನೇತೃತ್ವದಲ್ಲಿ ಸಭೆ ಸೇರಿದ ಪದಾಧಿಕಾರಿಗಳು ರೈತರಿಗಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಳಿಕ ಕೃಷಿಉತ್ಪನ್ನ ಮಾರುಕಟ್ಟೆ,ಪಶುಆಸ್ಪತ್ರೆ, ಬೆಸ್ಕಾಂ ಕಛೇರಿ, ರೈತಸಂಪರ್ಕ ಕೇಂದ್ರಕ್ಕೆ ತೆರಳಿ ತಮಗಾಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾತಿನ ಚಕಮುಕಿ ನಡೆಸಿದರು.
ಪಟ್ಟಣದ ಪಶು ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲದೆ ಇಲ್ಲಿಗೆ ರಾಸುಗಳನ್ನು ಹೊಡೆದುಕೊಂಡು ಬರುವ ರೈತರು ನಿತ್ಯ ಪರದಾಡುವಂತಾಗಿದೆ. ಜೊತೆಗೆ ರಾಸುಗಳಿಗೆ ಬರುವ ರೋಗಗಳಿಗೆ ಹಾಕಿಸುವ ಲಸಿಕಗಳ ಬಗ್ಗೆ ತಿಳಿಸಲು ಯಾರು ಇಲ್ಲದ ಕಾರಣ ರೈತರಿಗೆ ತೊಂದರೆಯಾಗುತ್ತಿದೆ. ಇಲ್ಲಿರುವ ವೈದ್ಯರಲ್ಲಿ ಒಬ್ಬ ವೈದ್ಯ ಕಳೆದ ಮೂರು ತಿಂಗಳಿಂದ ಆಸ್ಪತ್ರೆಗೆ ಬಂದಿಲ್ಲ ಅದರೂ ಸಹ ಈ ಬಗ್ಗೆ ಮೇಲಾಧಿಕಾರಿಗಳು ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದು ತಿಳಿದಿಲ್ಲ. ಈ ಹಿಂದೆ ಇದ್ದ ವೈದ್ಯ ಮಂಜುನಾಥ್ ಅವರು ವರ್ಗಾವಣೆಯಾಗಿ ಮೂರುತಿಂಗಳು ಕಳೆಯುತ್ತಿದ್ದರೂ ಸಹ ಅವರ ಸ್ಥಾನಕ್ಕೆ ಯಾವೊಬ್ಬ ವೈದ್ಯರನ್ನು ನೇಮಕ ಮಾಡಿಲ್ಲ ಎಂದು ದೂರಿ, ಸದ್ಯ ಒಬ್ಬ ವೈದ್ಯರನ್ನಾದರೂ ಇಲ್ಲಿ ಖಾಯಂ ಆಗಿ ಹಾಕುವಂತೆ ಒತ್ತಾಯಿಸಿದರು.
ನಂತರ ರೈತಸಂಪರ್ಕ ಇಲಾಖೆಗೆ ತೆರಳಿ ಇಲಾಖೆಗೆ ಬರುವ ಸೌಲಭ್ಯಗಳ ಬಗೆಗಿನ ಮಾಹಿತಿ ರೈತರಿಗೆ ತಿಳಿಯುತ್ತಿಲ್ಲ, ರೈತ ಅನುವುಗಾರರ ಮೂಲಕ ಇಲಾಖೆಯಲ್ಲಿ ದೊರೆಯಲ್ಲಿನ ಮಾಹಿತಿಯನ್ನು ತಿಳಿಸುವ ಕಾರ್ಯವಾಗಬೇಕು. ರಾಗಿ ಬೆಳೆಗೆ ಬಿದ್ದಿರುವ ಹಸಿರುಹುಳುಗಳ ನಿವಾರಣೆಗೆ ಸಬ್ಸಿಡಿ ದರದಲ್ಲಿ ಔಷಧಿ ನೀಡುವಂತೆ ಮನವಿ ಮಾಡಿದರು.
ಎಪಿಎಂಸಿ ಕಛೇರಿಗೆ ತೆರಳಿದ್ದ ರೈತರ ತಂಡ ಸಹಕಾರ್ಯದರ್ಶಿ ಅವರೊಂದಿಗೆ ಮಾತುಕತೆ ನಡೆಸಿ ಈ ಹಿಂದೆ ವಾರಕ್ಕೆ ಎರಡು ಬಾರಿ ಕೊಬ್ಬರಿ ಟೆಂಡರ್ ಮಾಡುತ್ತಿತ್ತು ಆದರೆ ಈಗ ವಾರಕ್ಕೊಮ್ಮೆ ಟೆಂಡರ್ ಮಾಡುತ್ತಿದ್ದು ವಾರಪೂರ್ತಿ ಒಂದೇ ಮೌಲ್ಯದಲ್ಲಿ ಕೊಬ್ಬರಿ ಮಾರುವಂತಾಗಿದೆ.
ತಿಪಟೂರು,ಅರಸೀಕೆರೆ ಎಪಿಎಂಸಿಯಲ್ಲಿ ವಾರಕ್ಕೆ ಎರಡು ಬಾರಿ ಟೆಂಡರ್ ಮಡುವಂತೆ ಇಲ್ಲೂ ಸಹ ಮಾಡಿ ಎಂದು ಪಟ್ಟು ಹಿಡಿದರು.
ಎಪಿಎಂಸಿ ಅಧಿಕಾರಿಯೊಂದಿಗೆ ವಾರಕ್ಕೆರಡು ಬಾರಿ ಕೊಬ್ಬರಿ ಟೆಂಡರ್ ಮಾಡುವಂತೆ ಚರ್ಚೆಗಿಳಿದ ರೈತ ಸಂಘದವರು.
ಬೆಸ್ಕಾಂ ಕಛೇರಿಯಲ್ಲಿನ ಎಸ್‍ಓ ಅವರೊಂದಿಗೆ ಚರ್ಚಿಸಿ, ಕಳೆದ 7 ವರ್ಷಗಳಿಂದ ಹುಳಿಯಾರು ಪಕ್ಕದ ಕೆಸಿ ಪಾಳ್ಯಕ್ಕೆ ಟೌನ್ ಲಿಮಿಟ್ ವಿದ್ಯುತ್ ನೀಡುತ್ತಿದ್ದು ಇದೀಗ ಏಕಾಏಕಿ ಕಡಿತ ಮಾಡಿದ್ದೀರಾ ಏಕೆ ಎಂದು ಪ್ರಶ್ನಿಸಿದರಲ್ಲದೆ, ಕೆಸಿಪಾಳ್ಯದ ಪಕ್ಕದ ಲಿಂಗಪ್ಪನ ಪಾಳ್ಯಕ್ಕೂ ಟೌನ್ ಲಿಮಿಟ್ ವಿದ್ಯುತ್ ನೀಡುವಂತೆ ಕೇಳಿಕೊಂಡರು. ಎಸ್‍ಓ ಉಮೇಶ್ ನಾಯಕ್ ಇದಕ್ಕೆ ಪ್ರತಿಕ್ರಿಯಿಸಿ ಈ ಹಿಂದೆ ಟೌನ್ ಲಿಮಿಟ್ ವಿದ್ಯುತ್ ನೀಡುತ್ತಿತ್ತು ಇದೀಗ ಬಳಕೆ ಪ್ರಮಾಣ ಹೆಚ್ಚಾದ ಪರಿಣಾಮ ಓವರ್ ಲೋಡ್ ನಿಂದ ಟಿ.ಸಿ. ಗಳು ಕೆಟ್ಟು ಹೋಗುತ್ತಿವೆ ಆ ಹಿನ್ನಲೆಯಲ್ಲಿ ಕಡಿತ ಮಾಡಲಾಗಿದೆ. ಮುಂದಿನವರ್ಷದಿಂದ ಎಲ್ಲಾ ಹಳ್ಳಿಗಳಿಗೂ ನಿರಂತರ ವಿದ್ಯುತ್ ಸಂಪರ್ಕದ ವ್ಯವಸ್ಥೆಯಾಗಿದ್ದು, ಕಾಮಗಾರಿ ಮಾತ್ರ ನಡೆಯಬೇಕಿದೆ ಎಂದರು.
ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತೆ ಪುಟ್ಟಣ್ಣಯ್ಯ ಅವರನ್ನು ಪೋನ್ ಮುಖಾಂತರ ಸಂಪರ್ಕಿಸಿದ ಅವರುಗಳು ಇದೀ ತಿಂಗಳ 21ರಂದು ಬೆಂಗಳೂರಿಗೆ ತೆರಳಿ ಆಯಾ ಇಲಾಖಾ ಮಂತ್ರಿಗಳನ್ನು ಭೇಟಿ ಮಾಡುವ ಕಾರ್ಯಕ್ರಮ ನಿಗದಿಮಾಡಿಕೊಂಡರು.

ಈ ವೇಳೆ ಹೋಬಳಿಯ ಕೆಂಕೆರೆ,ಲಿಂಗಪ್ಪನಪಾಳ್ಯ, ಸೂರಗೊಂಡನಹಳ್ಳಿ,ಹೊಸಳ್ಳಿ, ಬರಕನಹಾಲ್ ಸೇರಿದಂತೆ ವಿವಿಧ ಹಳ್ಳಿಗಳ ಪದಾಧಿಕಾರಿಗಳ ಜೊತೆ ಮಹಿಳಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...