ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಸ್.ಕೆ.ಜಯಣ್ಣ (೪೫) ಗುರುವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಎಸ್.ಕೆ.ಜಯಣ್ಣ. |
ಮೃತರು ಪಿಯು ಕಾಲೇಜಿನಲ್ಲಿ ಕಳೆದ ೧೫ ವರ್ಷಗಳಿಂದ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳಿಂದ ಹಲವಾರು ಸಮಸ್ಯೆಗಳಿಂದ ತೀವ್ರ ಆನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಅಪೋಲೋ , ತುಮಕೂರಿನ ಟಿ.ಎಚ್.ಎಸ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಕೊಡಿಸಲಾಗಿತ್ತು. ಬುಧವಾರವಷ್ಟೆ ಆಸ್ಪತ್ರೆಯಿಂದ ಮನೆಗೆ ವಾಪಸ್ ಕರೆತರಲಾಗಿದ್ದ ಅವರು ಗುರುವಾರ ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ೨ ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಪಿಯುಕಾಲೇಜಿನ ಪ್ರಾಂಶುಪಾಲ ನಟರಾಜ್ , ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಬೆಳಗ್ಗೆಯಿಂದಲೇ ಮೃತರ ಮನೆಗೆ ತೆರಳಿ ಅಂತಿಮ ದರ್ಶನ ಪಡೆದರು. ಅಂತ್ಯಕ್ರಿಯೆ ಸ್ವಗ್ರಾಮ ಅರಸೀಕೆರೆ ತಾಲ್ಲೂಕು ಸೊಪ್ಪಿನಹಳ್ಳಿಯಲ್ಲಿ ಶುಕ್ರವಾರ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ೮೧೫೦೯೨೬೨೯೪ ಮೊಬೈಲ್ ಸಂಖ್ಯೆ ಸಂಪರ್ಕಿಸಬಹುದು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ