ಕಾಂಗ್ರೆಸ್ ಕಾರ್ಯಕರ್ತರಿಂದ ಹೋಬಳಿ ವ್ಯಾಪ್ತಿಯಲ್ಲಿ ಮುಖಂಡ ಸಾಸಲು ಸತೀಶ್ ನೇತೃತ್ವದಲ್ಲಿ ಬುಧವಾರದಂದು ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು.
ಹುಳಿಯಾರು ಪಟ್ಟಣ ಪರಿವೀಕ್ಷಣ ಮಂದಿರದಲ್ಲಿ ಕಾಂಗ್ರೆಸ್ ಸೇರ್ಪಡೆಯಾದವರಿಗೆ ಸಾಸಲು ಸತೀಶ್ ಕಾಂಗ್ರೆಸ್ ನ ಶಾಲು ಹಾಕಿ ಸೇರ್ಪಡೆ ಮಾಡಿಕೊಂಡರು. |
ಪಟ್ಟಣದ ಪರಿವೀಕ್ಷಣ ಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಿ ನಂತರ ಪಟಣ್ಣದ ಕೆಲ ಮನೆಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಸಾಧನೆ ಹಾಗೂ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿಕಾರ್ಯಗಳ ಬಗ್ಗೆ ತಿಳಿಸುತ್ತಾ ಕಾಂಗ್ರೆಸ್ ಪಕ್ಷಕ್ಕೆ ಸದಸ್ಯರಾಗುವಂತೆ ಕಾರ್ಯಕರ್ತರು ತಿಳಿಸುತ್ತಿದ್ದರು.
ಸಾಸಲು ಸತೀಶ್ ಮಾತನಾಡಿ, ಸದಸ್ಯತ್ವ ಅಭಿಯಾನಕ್ಕೆ ಸೋನಿಯಾಗಾಂಧಿ ಅವರು ಈಗಾಗಲೇ ಚಾಲನೆ ನೀಡಿದ್ದು ಅದರಂತೆ ನಾವೂ ಸಹ ತಾಲ್ಲೂಕಿನಾದ್ಯಂತ ಅಭಿಯಾನ ಹಮ್ಮಿಕೊಂಡಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯ ಜನರಿಗಾಗಿ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ ಸೇರಿದಂತೆ ಹತ್ತಾರೂ ಜನಪರ ಯೋಜನೆಗಳನ್ನು ರೂಪಿಸಿ ಸಾರ್ವಜನಿಕರಿಗೆ ನೆರವಾಗಿದ್ದು ಕಾಂಗ್ರೆಸ್ ಬಗ್ಗೆ ಸಾಮಾನ್ಯ ಜನರಲ್ಲಿ ನಂಬಿಕೆ ಹೆಚ್ಚಾಗಿದೆ.
ಅಲ್ಲದೆ ಈ ಕ್ಷೇತ್ರದ ಸಂಸದರಾಗಿರುವ ಮುದ್ದುಹನುಮೇಗೌಡರು ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ತೆರಳಿ ಸಭೆ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿ ಅವುಗಳನ್ನು ಬಗೆಹರಿಸಲು ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷ ಜನಪರ ಕಾರ್ಯಗಳು ಹೆಚ್ಚೆಚ್ಚು ಮಾಡುತ್ತಿದ್ದು ಈ ನಿಟ್ಟಿನಲ್ಲಿ ಮತದಾರರು ಹೆಚ್ಚು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸದಸ್ಯರಾಗುವಂತೆ ತಿಳಿಸಿದರು.
ಈ ವೇಳೆ ಹುಳಿಯಾರು ಗ್ರಾ.ಪಂ.ಸದಸ್ಯ ಸಯದ್ ಮಹಬೂಬ್ , ನಾಸೀರ್ ಬೇಗ್, ತಮ್ಮಡಿಹಳ್ಳಿಯ ಕದಿರೇಗೌಡ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಅಭಿಯಾನದಲ್ಲಿ ಎಪಿಎಂಸಿ ಸದಸ್ಯ ಸಿದ್ದರಾಮಣ್ಣ, ತಾಲ್ಲೂಕು ಯುವಕಾಂಗ್ರೆಸ್ ಅಧ್ಯಕ್ಷ ಹೊಸಳ್ಳಿ ಅಶೋಕ್, ಜಿಲ್ಲಾಫ್ರಧಾನ ಕಾರ್ಯದರ್ಶಿ ಶೇಷಾನಾಯ್ಕ,ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು,ಕೆಂಕೆರೆ ಶಿವಕುಮಾರ್, ವೆಂಕಟೇಶ್,ಪ್ರಸನ್ನ, ಮೋಹನ್ ಕುಮಾರ್ ರೈ ಸೇರಿದಂತೆ ಇತರ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ