ತಾಲ್ಲೂಕು ದಲಿತ ಸಹಾಯವಾಣಿ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟದಡಿಯಲ್ಲಿ ಇದೇ ೨೧ರಂದು ಅಂಬೇಡ್ಕರ್ ಪರಿನಿರ್ವಾಣದ ದಿನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳೀಗೆ ಪುರಸ್ಕಾರ ಹಾಗೂ ತಮಟೆ ಸ್ಪರ್ಧೆ ನಡೆಯಲಿದೆ.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು ವಿವಿಧ ದಲಿತ ಮುಖಂಡರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.ಇದೇ ವೇಳೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ೨೦೧೩-೧೪ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹೆಸರು ನೊಂದಾಯಿಸಿಕೊಳ್ಳಬಹುದು. ಅಲ್ಲದೆ ತಾಲ್ಲೂಕು ಮಟ್ಟದ ತಮಟೆಸ್ಪರ್ಧೆ ಕೂಡ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೯೦೧೫೯೩೨೪೫ ಸಂಪರ್ಕಿಸಬಹುದಾಗಿದೆ ಎಂದು ಕಾರ್ಯದರ್ಶಿ ಹಾಗಲವಾಡಿ ಚಿಕ್ಕಣ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ