ಹುಳಿಯಾರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ಸ್ಮರಣೆ ಅಂಗವಾಗಿ ಇಂದು ಶನಿವಾರ ಬೆಳಿಗ್ಗೆ ಹುಳಿಯಾರು-ಕೆಂಕೆರೆ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ನುಡಿಹಬ್ಬ ಕಾರ್ಯಕ್ರಮ ನಡೆಯಲಿದೆ.
ಚಿಕ್ಕನಾಯಕನಹಳ್ಳಿಯ ನಿವೃತ್ತ ಕನ್ನಡ ಉಪನ್ಯಾಸಕ ಮಾ.ಚಿ.ಕೈಲಾಸನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರಾಂಶುಪಾಲ ನಟರಾಜ್ ಅಧ್ಯಕ್ಷತೆವಹಿಸುವರು. ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ನ ಸದಸ್ಯರು ಹಾಗೂ ಸಾಹಿತಿಗಳು ಆದ ತ.ಶಿ.ಬಸವಮೂರ್ತಿಯವರು ಗಮಕವಾಚನ ಮಾಡಲಿದ್ದು, ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಹಾಗೂ ಸಾಹಿತಿಗಳು ಆದ ಬಿಳಿಗೆರೆಕೃಷ್ಣಮೂರ್ತಿ ಅವರು ಕನ್ನಡ ನಾಡುನುಡಿ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ೨೦೧೪ನೇ ಸಾಲಿನ ಹತ್ತನೇ ತರಗತಿ ಹಾಗೂ ಪಿಯುಸಿಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ನಡೆಯಲಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ