ಕನ್ನಡ ನಾಡೀನಲ್ಲಿ ಇತರ ಭಾಷೆಗಳ ಅತಿಯಾದ ವ್ಯಾಮೋಹದಿಂದ ಕನ್ನಡ ನಾಡು-ನುಡಿ ಕ್ಷಿಣಿಸುತ್ತಿದ್ದು ಅದನ್ನು ಉಳಿಸಿ ಬೆಳೆಸುವಲ್ಲಿ ಇಂದಿನ ಯುವಪೀಳಿಗೆಯವರು ಮುಂದಾಗ ಬೇಕು ಎಂದು ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಹಾಗೂ ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ತಿಳಿಸಿದರು.
ಹುಳಿಯಾರಿನ ವಾಸವಿ ವಿದ್ಯಾಸಂಸ್ಥೆಯ ಟಿ.ಆರ್.ಎಸ್.ಆರ್ ಕನ್ನಡ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ಉದ್ಘಾಟಿಸಿದರು. |
ಹುಳಿಯಾರಿನ ವಾಸವಿ ವಿದ್ಯಾಸಂಸ್ಥೆಯ ಟಿ.ಆರ್.ಎಸ್.ಆರ್ ಕನ್ನಡ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ನಡೆಯುವಂತಹ ಅನೇಕ ಕಾರ್ಯಕ್ರಮಗಳನ್ನು ಗಮನಿಸಿದರೆ ನಮ್ಮ ಜಾನಪದ ಸೊಗಡು ಹಾಗೂ ಕನ್ನಡ ಸಾಹಿತ್ಯವನ್ನು ಹೆಚ್ಚು ಬಳಸದೆ ಇತರ ಭಾಷೆಯ ಹಾಡುಗಳನ್ನು ಅಥವಾ ರಿಮೇಕ್ ಹಾಡುಗಳನ್ನು ಅತಿಯಾಗಿ ಬಳಸುತ್ತಿರುವುದು ವಿಷಾದನೀಯ ಎಂದರು. ಶಾಲೆಗಳಲ್ಲಿ ನಡೆಯುವ ಕಾರ್ಯಕ್ರಮಗಳು ಕನ್ನಡ ಸಾಹಿತ್ಯಕ್ಕೆ ಪೂರಕವಾಗಿ ನಡೆಸಬೇಕಿದೆ ಎಂದು ತಿಳಿಸಿದರು.
ಸಂಸ್ಥೆಯ ಎಲ್.ಆರ್.ಚಂದ್ರಶೇಖರ್ ಮಾತನಾಡಿ ಸಾಂಸ್ಕ್ರತಿಕ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಸೂಕ್ತವೇದಿಕೆಯಾಗಿದ್ದು, ಮಕ್ಕಳು ಇಂತಹ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ತಿಳಿಸಿದರು. ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಅನುವು ಮಾಡಲು ಆರ್ಯವೈಶ್ಯ ಜನಾಂಗ ತೀರ್ಮಾನಿಸಿದ್ದರ ಫಲವಾಗಿ ಟಿ.ಆರ್.ಎಸ್.ಆರ್ ಶಾಲೆ ಸ್ಥಾಪನೆಯಾಗಿದ್ದು , ಗ್ರಾಮೀಣ ಭಾಗದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದೆ ಎಂದು ಶ್ಲಾಘಿಸಿದರು.
ಸಂಸ್ಥೆಯ ಅಧ್ಯಕ್ಷ ಟಿ.ಆರ್.ಲಕ್ಷ್ಮಿಕಾಂತ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದು, ಕಾರ್ಯದರ್ಶಿ ರಾಮನಾಥ್,ನಿರ್ದೇಶಕರಾದ ಗಾಯತ್ರಿ, ಲಕ್ಷ್ಮಿ, ಮುಖ್ಯ ಶಿಕ್ಷಕ ಹೆಚ್.ವಿ.ರಮೇಶ್,ಸಹಶಿಕ್ಷಕರಾದ ಗಂಗಾಧರಯ್ಯ, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ