ಹುಳಿಯಾರು ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ೨೦೧೪-೧೫ ನೇ ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಮುಕ್ತಾಯ ಸಮಾರಂಭ ನಾಳೆ ಗುರುವಾರ ನಡೆಯಲಿದೆ.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೆಚ್.ಡಿ.ಲಿಂಗರಾಜು ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಸಿ.ಬಿ.ಸುರೇಶ್ ಬಾಬು ಅಧ್ಯಕ್ಷತೆವಹಿಸಲಿದ್ದಾರೆ. ಕಾರ್ಯನಿರ್ವಹಣಾಧಿಕಾರಿ ಕೆ.ಹೆಚ್.ಕೃಷ್ಣಮೂರ್ತಿ, ಪಟ್ಟನಾಯಕನಹಳ್ಳಿ ಪಿಯು ಕಾಲೇಜಿನ ಪ್ರಾಂಶುಪಾಲ ಸಿ.ಆರ್.ಕೃಷ್ಣಯ್ಯ, ಕಿರುತೆರೆ ಕಲಾವಿದ ಎನ್.ಎಸ್.ರಾಮಾನಂದ, ತಾಲ್ಲೂಕ್ ಸಮಾಜ ಕಲ್ಯಾಣಾಧಿಕಾರಿ ರಾಮಣ್ಣ,ಜಿ.ಪಂ.ಸದಸ್ಯೆ ಮಂಜುಳಮ್ಮ, ಗ್ರಾ.ಪಂ.ಅಧ್ಯಕ್ಷೆ ಕಾಳಮ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಪೋಷಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪ್ರಾಂಶುಪಾಲ ಬಾಲಾಜಿ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ