೨೦೧೪-೧೫ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ, ಎನ್.ಎಸ್.ಎಸ್.ಘಟಕದ ಸಮಾರೋಪ ಹಾಗೂ ಪ್ರತಿಭಾಪುರಸ್ಕಾರ ಸಮಾರಂಭ ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ತಾ.೦೮ ಗುರುವಾರ ಮಧ್ಯಾಹ್ನ ನಡೆಯಲಿದೆ.
ಶಾಸಕ ಸಿ.ಬಿ.ಸುರೇಶ್ ಬಾಬು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು, ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಹೆಚ್.ಡಿ.ಲಿಂಗರಾಜು ಉದ್ಘಾಟನೆ ನೆರವೇರಿಸುವರು. ಚಿ.ನಾ.ಹಳ್ಳಿ ಪಿಯು ಕಾಲೇಜಿನ ಪ್ರಾಂಶುಪಾಲ ಕೆ.ನಾಗರಾಜ್ ಅತಿಥಿಗಳಾಗಿ ಆಗಮಿಸಲಿದ್ದು, ಮಕ್ಕಳಿಂದ ಸಾಂಸ್ಕೃತಿಕಕಾರ್ಯಕ್ರಮ ಸಹ ಅಯೋಜಿಸಿರುವುದಾಗಿ ಪ್ರಾಚಾರ್ಯ ನಟರಾಜ್ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ