ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲೂ ಪ್ರತಿಭಾವಂತ ಮಕ್ಕಳಿದ್ದಾರೆ.ಅಂತಹ ಮಕ್ಕಳನ್ನು ಗುರ್ತಿಸಿ ಉತ್ತೇಜನ ನೀಡುವಲ್ಲಿ ಶಿಕ್ಷಕರು ಹಾಗೂ ಪೋಷಕರು ಮುಂದಾಗಬೇಕು ಎಂದು ಹುಳಿಯಾರು-ಕೆಂಕೆರೆ ಸರ್ಕಾರಿ ಪಿಯು ಕಾಲೇಜಿನ ಕನ್ನಡ ಉಪನ್ಯಾಸಕ ಶಶಿಭೂಷಣ್ ತಿಳಿಸಿದರು.
ಹುಳಿಯಾರು ಹೋಬಳಿ ಹೊಸಹಳ್ಳಿ ಪಾಳ್ಯದ ಸ||ಕಿ||ಪಾಠಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಜಿ.ಪಂ.ಸದಸ್ಯೆ ಮಂಜುಳಾ ಗವಿರಂಗಯ್ಯ ಉದ್ಘಾಟಿಸಿದರು. |
ಹುಳಿಯಾರು ಹೋಬಳಿ ಹೊಸಹಳ್ಳಿ ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಅಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಸರ್.ಎಂ.ವಿಶ್ವೇಶ್ವರಯ್ಯ, ಅಂಬೇಡ್ಕರ್, ವಿವೇಕಾನಂದರು ಸೇರಿದಂತೆ ಅನೇಕ ಮಹಾನ್ ವ್ಯಕ್ತಿಗಳು ಹಳ್ಳಿಗಳಲ್ಲಿ ಬೆಳೆದು ಮಹಾನ್ ವ್ಯಕ್ತಿಗಳಾಗಿ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ ಎಂದರು. ಸಾಂಸ್ಕೃತಿಕಕಾರ್ಯಕ್ರಮಗಳು ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರುವ ವೇದಿಕೆಗಳಾಗಿದ್ದು ಎಲ್ಲಾ ಮಕ್ಕಳು ಸಕ್ರಿಯವಾಗಿ ಪಾಲ್ಗೊಳ್ಳಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಜಿ.ಪಂ.ಸದಸ್ಯೆ ಮಂಜುಳಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರಯ್ಯ ಅಧ್ಯಕ್ಷತೆವಹಿಸಿದ್ದರು.ಶಿಕ್ಷಕರ ಸಂಘದ ನಿರ್ದೇಶಕರಾದ ಈಶ್ವರಯ್ಯ,ಚಂದ್ರಯ್ಯ, ಪ್ರಧಾನಕಾರ್ಯದರ್ಶಿಗಳಾದ ಶಂಕರ್, ಸರ್ಕಾರಿ ನೌಕರರ ಸಂಘದ ಪರಶಿವಮೂರ್ತಿ,ನಿರ್ದೇಶಕ ಸುರೇಶ್, ಹಂದನಕೆರೆ ಹೋಬಳಿಯ ಶಿಕ್ಷಣಸಂಯೋಜರಾದ ಕುಮಾರಸ್ವಾಮಿ, ಶಿಕ್ಷಕರಾದ ಜಯಲಕ್ಷ್ಮಿ, ಬಸವರಾಜು,ಪ್ರೇಮಾಕ್ಷಿ ಸೆರಿದಂತೆ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ