ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆವತಿಯಿಂದ ಹೋಬಳಿಯ ದಸೂಡಿ ಗ್ರಾಮದಲ್ಲಿ ರೈತಸಂಘದ ನೂತನ ಗ್ರಾಮಘಟಕದ ಉದ್ಘಾಟನೆ (ತಾ.೧೯) ಸೋಮವಾರ ಸಂಜೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ನಡೆಯಲಿದೆ.
ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸಂಘ ಉದ್ಘಾಟಿಸಲಿದ್ದು,ರಾಜ್ಯ ಉಪಾಧ್ಯಕ್ಷೆ ಅನುಸೂಯಮ್ಮ, ರಾಜ್ಯಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ರಾಜ್ಯ ಹಸಿರುಸೇನೆಯ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್, ರಾಜ್ಯಕಾರ್ಯದರ್ಶಿ ಈಚಘಟ್ಟದ ಸಿದ್ದವೀರಪ್ಪ ಚಿ.ನಾ.ಹಳ್ಳಿ ತಾಲ್ಲೂಕು ಅಧ್ಯಕ್ಷ ಕೆ.ಪಿ.ಮಲ್ಲೇಶ್, ತಮ್ಮಡಿಹಳ್ಳಿ ಮಲ್ಲಿಕಣ್ಣ, ತಿಮ್ಮನಹಳ್ಳಿ ಲೋಕೇಶ್, ಜಿಲ್ಲಾ ಸಂಚಾಲಕ ತಿಮ್ಲಾಪುರ ಶಂಕರಣ್ಣ,ದಬ್ಬೇಘಟ್ಟ ಜಗದೀಶ್, ಮಾಜಿಸೈನಿಕ ರಾಮಚಂದ್ರಪ್ಪ ಸೇರಿದಂತೆ ಇತರರು ಆಗಮಿಸಲಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ