ವಿಷಯಕ್ಕೆ ಹೋಗಿ

ರಂಗನಾಥಸ್ವಾಮಿಯ ಸಪ್ತದ್ವಾರ ವೈಕುಂಠ ದರ್ಶನಕ್ಕೆ ಜನವೋ...ಜನ

ಹುಳಿಯಾರು ಪಟ್ಟಣದ ಇತಿಹಾಸ ಪ್ರಸಿದ್ಧ ಅನಂತಶಯನ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ ಗುರುವಾರ ಸಂಜೆ ನಡೆದ ಸಪ್ತದ್ವಾರ ವೈಕುಂಠ ದರ್ಶನ ವೀಕ್ಷಣೆಗೆ ಅಪಾರ ಸಂಖ್ಯೆಯ ಜನ ನೆರೆದಿದ್ದು ಸರದಿ ಸಾಲಿನಲ್ಲಿ ನಿಂತು ಸ್ವಾಮಿಯ ವಿಶೇಷ ಅಲಂಕಾರವನ್ನು ಕಣ್ತುಂಬಿಕೊಂಡರು.
ಹುಳಿಯಾರಿನ ಶ್ರೀರಂಗನಾಥಸ್ವಾಮಿಯ ದರ್ಶನಕ್ಕೆ ಸರದಿ ಸಾಲಿನಲ್ಲಿ ಆಗಮಿಸಿದ ಅಪಾರ ಸಂಖ್ಯೆಯ ಭಕ್ತರು.

ಹುಳಿಯಾರಿನ ಅನಂತಶಯನ ಶ್ರೀ ರಂಗನಾಥಸ್ವಾಮಿಯ ಸಪ್ತದ್ವಾರ ವೈಕುಂಠ ದರ್ಶನದ ಅಂಗವಾಗಿ ಮಾಡಿದ್ದ ಆಕರ್ಷಕ ಅಲಂಕಾರ.


ಹುಳಿಯಾರಿನ ಮುಖ್ಯಪ್ರಾಣ ಭಜನಾ ಮಂಡಳಿಯವರು ವೈಕುಂಠ ಏಕಾದಶಿ ಅಂಗವಾಗಿ ರಂಗನಾಥಸ್ವಾಮಿ ಸನ್ನಿಧಿಯಲ್ಲಿ ಭಜನಾಕಾರ್ಯ ನಡೆಸಿಕೊಟ್ಟರು.
ರಂಗನಾಥಸ್ವಾಮಿ ದೇವಾಲಯದಲ್ಲಿ ಇದೇ ಪ್ರಪ್ರಥಮ ಬಾರಿ ಸಪ್ತದ್ವಾರ ವೈಕುಂಠದರ್ಶನ ಏರ್ಪಡಿಸಿದ್ದು ಗ್ರಾಮದೇವತೆಗಳಾದ ಹುಳಿಯಾರಮ್ಮ, ದುರ್ಗಮ್ಮ ಹಾಗೂ ಆಂಜನೇಯ ಸ್ವಾಮಿಯ ಸಮ್ಮುಖದಲ್ಲಿ ಹೋಮ-ಹವನಾದಿಗಳನ್ನು ನಡೆಸಿದ್ದರು. ಸಂಜೆ ವೇಳೆಗೆ ದೇವಾಲಯ ಆವರಣದಲ್ಲಿ ಸಪ್ತದ್ವಾರಗಳನ್ನು ಸಿದ್ದಗೊಳಿಸಿ ಅಲಂಕರಿಸಿದ್ದರಲ್ಲದೆ ರಂಗನಾಥಸ್ವಾಮಿಯ ಮೂಲ ವಿಗ್ರಹವನ್ನು ಸಹ ಆಕರ್ಷಕವಾಗಿ ಅಲಂಕರಿಸಿದ್ದರು. ಸಪ್ರದ್ವಾರದ ಮೂಲಕ ಸ್ವಾಮಿಯ ದರ್ಶನ ಪಡೆಯಲು ಸಂಜೆಯಿಂದಲೇ ಬಾರಿ ಜನ ಸೇರಿದ್ದು ಬಾಗಿಲು ತೆರೆಯುವುದನ್ನು ಕಾದಿದ್ದರು. ಸ್ವಾಮಿಗೆ ಮಹಾಮಂಗಳಾರತಿ ನಡೆದ ಬಳಿಕ ಮುಖ್ಯದ್ವಾರಕ್ಕೂ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆದು ಭಕ್ತರ ದರ್ಶನಕ್ಕೆ ಅನುವುಮಾಡಿಕೊಡಲಾಯಿತು. ಭಕ್ತರು ಸರದಿ ಸಾಲಿನಲ್ಲಿ ಸಾಗುತ್ತಾ ಸ್ವಾಮಿಗೆ ಹಣ್ಣುಕಾಯಿ ಮಾಡಿಸಿದರು. ಸರದಿಸಾಲು ದೇವಾಲಯದಿಂದ ಹುಳಿಯಾರಮ್ಮನ ದೇವಾಲಯದವರೆಗಿದ್ದರೂ ಸಹ ನೂಕುನುಗ್ಗಲಿಗೆ ಅವಕಾಶಕೊಡದೆ ಭಕ್ತರು ಶಾಂತರೀತಿಯಲ್ಲಿ ಸಾಗುತ್ತಾ ಸ್ವಾಮಿಯ ದರ್ಶನ ಪಡೆದರು.
ಲಾಡು ವಿತರಣೆ : ಸಪ್ತದ್ವಾರದ ಮೂಲಕ ಸ್ವಾಮಿಯ ದರ್ಶನ ಪಡೆದ ಭಕ್ತರಿಗೆ ಲಾಡು ಹಾಗೂ ಗೊಜ್ಜವಲಕ್ಕಿ ವಿತರಿಸಿದರು. ಇದೇ ವೇಳೆ ಮುಖ್ಯಪ್ರಾಣ ಭಜನಾ ಮಂಡಳಿ, ಶೇಷಾದ್ರಿ, ವೆಂಕಟಾದ್ರಿ, ಮಾರುತಿ ಭಜನಾ ಮಂಡಳಿಯವರು ರಂಗನಾಥಸ್ವಾಮಿಯ ಗೀತೆಗಳನ್ನು ಹಾಡಿದರು.

ವೈಕುಂಠ ಏಕಾದಶಿ ಸಮಿತಿಯ ಅಧ್ಯಕ್ಷ ಧನುಷ್ ರಂಗನಾಥ್, ರಂಗನಾಥ ಶೆಟ್ಟಿ, ವಿಶ್ವನಾಥ್,ಕುಮಾರ್,ಹೇಮಂತ್ , ಕಾಂತರಾಜು,,ನರಸಿಂಹಮೂರ್ತಿ, ರಾಘವೇಂದ್ರ, ಶೇಷಾದ್ರಿ, ಅಶೋಕ್ ಬಾಬು, ಎಸ್.ಎಸ್.ಆರ್ ದಯಾನಂದ್,ಭೈರೇಶ್,ಮುರುಳಿ ಸೇರಿದಂತೆ ಸಮಿತಿಯವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...