ಹುಳಿಯಾರು ಪಟ್ಟಣ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ರೋಟರಿ ಸಂಸ್ಥೆಯ ಸಹಯೋಗದಲ್ಲಿ ನಡೆದ ೨೦೧೫ನೇ ಸಾಲಿನ ಮೊದಲ ಹಂತದ ಪಲ್ಸ್ ಪೋಲೀಯೋ ಲಸಿಕಾ ಕಾರ್ಯಕ್ರಮ ಭಾನುವಾರದಂದು ಯಶಸ್ವಿಯಾಗಿ ನಡೆಯಿತು.
ಹುಳಿಯಾರು ಬಸ್ ನಿಲ್ದಾಣದ ಪೋಲೀಯೋ ಬೂತ್ ನಲ್ಲಿ ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಎಂ.ಎಸ್.ನಟರಾಜ್ ಮಗುವಿಗೆ ಲಸಿಕೆ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. |
ಪಟ್ಟಣದಲ್ಲಿ ಬಸ್ ನಿಲ್ದಾಣ,ಸರ್ಕಾರಿ ಆಸ್ಪತ್ರೆ, ಮಾರುತಿನಗರದ ಕೇಶವ ಶಾಲೆ, ಇಂದಿರಾನಗರ,ಅಜಾದ್ ನಗರ, ಯಾಕೂಬ್ ಸಾಬ್ ಪಾಳ್ಯ, ಸೋಮಜ್ಜನಪಾಳ್ಯದ ಅಂಗನವಾಡಿ ಕೇಂದ್ರಗಳಲ್ಲಿ ಭಾನುವಾರ ಬೆಳಿಗ್ಗಿನಿಂದ ಸಂಜೆವರೆಗೆ ಲಸಿಕೆ ಹಾಕಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸದಾಶಿವು ಪೋಲಿಯೋಗೆ ಚಾಲನೆ ನೀಡಿ, ೫ ವರ್ಷದ ಒಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಸಹ ಇಂದು ಮತ್ತೊಮ್ಮೆ ತಪ್ಪದೆ ಲಸಿಕೆ ಹಾಕಿಸುವಂತೆ ಮನವಿಮಾಡಿದರು. ಬಸ್ ನಿಲ್ದಾಣದಲ್ಲಿ ಆರ್ಯವೈಶ್ಯ ಸಂಘದ ಅಧ್ಯಕ್ಷ ಎಂ.ಎಸ್.ನಟರಾಜ್ ಮಗುವಿಗೆ ಲಸಿಕೆ ಹಾಕುವ ಮೂಲಕ ಪೋಲಿಯೋ ಲಸಿಕಾ ಕಾರ್ಯಕ್ಕೆ ಚಾಲನೆ ನೀಡಿದರು. ರೋಟರಿ ಕಾರ್ಯಕರ್ತರು ಪ್ರತಿಯೊಂದು ಲಸಿಕಾ ಕೇಂದ್ರಗಳಲ್ಲು ಹಾಜರಿದ್ದು ವ್ಯವಸ್ಥಿತವಾಗಿ ನಿರ್ವಹಿಸಿದ್ದಲ್ಲದೆ, ಸಿಬ್ಬಂದಿಗಳಿಗೆ ಊಟ,ತಿಂಡಿ ಪೂರೈಸಿದ್ದರು. ವೈದ್ಯೆ ಶೋಭಾ, ರೋಟರಿ ಸಂಸ್ಥೆಯ ಅಧ್ಯಕ್ಷ ಈ.ರವೀಶ್, ಪದಾಧಿಕಾರಿಗಳಾದ ಗಂಗಾಧರ್ ರಾವ್, ನಂದಿಹಳ್ಳಿ ಗಂಗಾಧರ್ ಸೇರಿದಂತೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಹಾಜರಿದ್ದು ವ್ಯವಸ್ಥಿತವಾಗಿ ನಿರ್ವಹಿಸಿದರು. ಹೋಬಳಿ ವ್ಯಾಪ್ತಿಯಲ್ಲಿ ಒಟ್ಟು ೨೭೦೯ ಮಕ್ಕಳ ಗುರಿಹೊಂದಿದ್ದು, ೨೫೩೭ ಮಕ್ಕಳಿಗೆ ಲಸಿಕೆ ಹಾಕಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಮನೆಮನೆಗೆ ತೆರಳಿ ಲಸಿಕೆ ಹಾಕುವ ಮುಖಾಂತರ ಪೂರ ಗುರಿಮುಟ್ಟಲಾಗುವುದೆಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ