ಸ್ವಚ್ಚತಾ ಆಂದೋಲನ ಮತ್ತು ಪ್ಲಾಸ್ಟಿಕ್ ಬಳಕೆಯ ವಿರುದ್ದ ಅರಿವು ಕಾರ್ಯಕ್ರಮದಡಿ ಮಂಗಳವಾರ ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಹಯೊಗದಲ್ಲಿ ವಿದ್ಯಾರ್ಥಿಗಳು ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ಲಾಸ್ಳಿಕ್ ಬಳಕೆ ವಿರೋಧಿಸಿ ಘೋಷಣೆಗಳನ್ನು ಕೂಗುತ್ತಾ ಜಾಥಾ ನಡೆಸಿದರು. |
ಕಾಲೇಜಿನಿಂದ ಪ್ರಾರಂಭವಾದ ಜಾಥಾ ಲಿಂಗಪ್ಪನಪಾಳ್ಯ, ಕೆ.ಸಿ.ಪಾಳ್ಯ,ಸೋಮಜ್ಜನಪಾಳ್ಯದ ಮೂಲಕ ಹುಳಿಯಾರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪ್ಲಾಸ್ಟಿಕ್ ಬಳಸದಂತೆ ಘೋಷಣೆಗಳನ್ನು ಕೂಗಿದರಲ್ಲದೆ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ಪರಿಣಾಮಗಳ ಬಗ್ಗೆ ಜನರಿಗೆ ತಿಳಿಸುತ್ತಾ ಅರಿವು ಮೂಡಿಸಿದರು. ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ರಾಜ್ಯವ್ಯಾಪಿ ಈ ಕಾರ್ಯಕ್ರಮ ನಡೆಯುತ್ತಿರುವುದಾಗಿ ಪ್ರಾಂಶುಪಾಲ ನಟರಾಜ್ ತಿಳಿಸಿದರು.
ವಿದ್ಯಾರ್ಥಿಗಳು ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ ಪರಿಸರ ಸಂರಕ್ಷಣೆ ಅಂಗವಾಗಿ ಕೆಲ ಸಮಯ ಸ್ವಚ್ಚತಾ ಕಾರ್ಯ ಸಹ ಮಾಡಿದರು. ಜಾಥಾದಲ್ಲಿ ಎನ್.ಎಸ್.ಎಸ್.ಅಧಿಕಾರಿ ಯೋಗೀಶ್,ಉಪನ್ಯಾಸಕರಾದ ಶಶಿಭೂಷಣ್,ರೇವಣ್ಣ,ಶಿವರುದ್ರಯ್ಯ,ಶಿವಾನಂದಶೆಟ್ಟಿ,ಗಿರೀಶ್,ಮಂಜುನಾಥ್ ಸೇರಿದಂತೆ ಇತರರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ