ಹುಳಿಯಾರು ಪಟ್ಟಣದ ನಾಡಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಪತಹಸೀಲ್ದಾರ್ ಸತ್ಯನಾರಾಯಣ್ ಮಾತನಾಡಿ ಮತದಾನ ನಮಗೆ ಸಂವಿಧಾನನೀಡಿರುವ ಅತ್ಯಮೂಲ್ಯವಾದ ಹಕ್ಕಾಗಿದ್ದು 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನ ಮಾಡಬಹುದಾಗಿದ್ದು ಈ ಹಕ್ಕನ್ನು ಎಲ್ಲರೂ ಸಮರ್ಥವಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದರು.
ಚುನಾವಣೆಯಲ್ಲಿಭಾಗವಹಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದ ಅವರು ಹಿಂದೆ 21ವರ್ಷಕ್ಕಿದ್ದ ಮತದಾನದಹಕ್ಕನ್ನು 18 ವರ್ಷಕ್ಕೆ ಇಳಿಸಿ ಯುವಜನರು ಸಕ್ರಿಯವಾಗಿ ಭಾಗವಹಿಸುವಂತೆ ಮಾಡಲಾಗಿದ್ದು ಯುವಜನರು ಅತ್ಯಂತ ಜವಾಬ್ದಾರಿಯುತವಾಗಿ ಚುನಾವಣೆಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನನೀಡಿರುವ ಅತ್ಯಮೂಲ್ಯವಾದಹಕ್ಕು ಚಲಾಯಿಸಬೇಕೆಂದರು.
ಕಂದಾಯ ತನಿಕಾಧಿಕಾರಿ ಹನುಮಂತನಾಯ್ಕ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾದ ಬಗ್ಗೆ ಹಾಗೂ ಹೊಸದಾಗಿ ನೊಂದಾಯಿಸುವ ಕುರಿತು ಮಾಹಿತಿಯನ್ನು ನೀಡಲಾಯಿತು.
ಗ್ರಾಮ ಲೆಕ್ಕಿಗ ಶ್ರೀನಿವಾಸ್, ಬಿಎಲ್‌ಒಗಳಾದ ಚಂದ್ರಶೇಖರ್, ಪೂರ್ಣಮ್ಮ, ರಮ್ಯ, ಸಿ.ಎಲ್.ಪೂರ್ಣಿಮಾ, ನಾಗರತ್ನ, ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರುಗಳಾದ ಪುಟ್ಟಿಬಾಯಿ, ಅಬೀದಾಬೀ ಮತ್ತಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ