ವಿಷಯಕ್ಕೆ ಹೋಗಿ

ಸಡಗರ ಸಂಭ್ರಮದಿಂದ ಈದ್-ಮಿಲಾದ್ ಆಚರಣೆ

ಇಸ್ಲಾಂ ಸಮುದಾಯದ ಪ್ರವಾದಿ ಮಹಮದ್ ಪೈಗಂಬರರ ಜನ್ಮ ದಿನದ ಅಂಗವಾಗಿ ಪಟ್ಟಣದಲ್ಲಿ ಈದ್-ಮಿಲಾದ್ ಹಬ್ಬವನ್ನು ಸಡಗರ ಸಂಭ್ರಮದಿಂದ ಭಾನುವಾರದಂದು ಆಚರಿಸಲಾಯಿತು.
ಹುಳಿಯಾರಿನ ಮುಸ್ಲಿಂ ಸಮುದಾಯದವರು ಈದ್-ಮಿಲಾದ್ ಹಬ್ಬದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ಹಬ್ಬದ ಅಂಗವಾಗಿ ಪಟ್ಟಣದ ಮದೀನಾ,ನೂರಾನಿ,ಜಾಮೀಯ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ಅಪಾರ ಸಂಖ್ಯೆಯ ಮುಸ್ಲಿಂ ಯುವಕರು ಮಕ್ಕಳೆನ್ನದೆ ಎಲ್ಲರೂ ಮದೀನಾ ಮಸೀದಿಯಲ್ಲಿಗೆ ಆಗಮಿಸಿ ಧರ್ಮಗುರುಗಳೊಂದಿಗೆ ಪಟ್ಟಣದ ಬಸ್ ನಿಲ್ದಾಣ, ರಾಜ್ ಕುಮಾರ್ ರಸ್ತೆ, ಬಿ.ಎಚ್.ರಸ್ತೆಯಲ್ಲಿ ಸಾಗಿ ಅಜಾದ್ ನಗರ,ಇಂದಿರಾ ನಗರದ ಮೂಲಕ ಮೆರವಣಿಗೆ ನಡೆಸಿದರು. ಮೆರವಣಿಯುದ್ದಕ್ಕೂ ಪೈಗಂಬರರ ಘೋಷಣೆ ಕೂಗುತ್ತಾ, ಹಾಡಿಗೆ ಹೆಜ್ಜೆಹಾಕುತ್ತಾ, ದೊಡ್ಡದೊಡ್ಡ ಭಾವುಟಗಳನ್ನು ಹಿಡಿದು ಅಲ್ಲಾಹೂವಿನ ಬಗ್ಗೆ ಘೋಷಣೆ ಕೂಗುತ್ತಾ ಸಾಗಿದರು.
ಈದ್-ಮಿಲಾದ್ ಆಚರಣೆಯ ಮಹತ್ವದ ಆಚರಣೆ ಕುರಿತಂತೆ ಜಾಮೀಯ ಮಸೀದಿಯ ಮುತುವಲ್ಲಿ ಜಬೀಉಲ್ಲಾ ಮಾತನಾಡಿ, ಪೈಗಂಬರರತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬ ಮುಸ್ಲಿಂರು ಜೀವನದಲ್ಲಿ ಅಳವಡಿಸಿಕೊಂಡು ನಡೆಯಬೇಕು ಹಾಗೂ ಪ್ರತಿಯೊಬ್ಬರು ವಿಶಾಲಮನೋಭಾವ ಬೆಳೆಸಿಕೊಂಡು, ಶಾಂತಯುತವಾಗಿ ಬಾಳಬೇಕೆಂದು ಕರೆ ನೀಡಿದರು. ನೂರಾನಿ ಮಸೀದಿಯ ಬೈಜುಸಾಬ್, ಗ್ರಾ.ಪಂ.ಸದಸ್ಯರಾದ ಜಹೀರ್ ಸಾಬ್, ಡಿಶ್ ಬಾಬು ,ಟಿಪ್ಪುಯುವಕ ಸಂಘದ ಇಮ್ರಾಜ್, ಟಿಫ್ಫು ಸಂಘಟನೆಯ ಸದಸ್ಯರು, ಟಿಪ್ಪುಯುವಕ ಸಂಘಟನೆ, ಟಿಫ್ಫು ಮಹಾವೇದಿಕೆಯವರು, ಮದೀನಾ, ಜಾಮೀಯ, ನೂರಾನಿ ಮಸೀದಿಯ ಸದಸ್ಯರು ಹಾಜರಿದ್ದರು, ಮೆರವಣಿಯ ಮಧ್ಯೆ ಯುವಕ ಸಂಘಟನೆ ಹಾಗೂ ಕೆಲ ಅಂಗಡಿಯವರು ಜ್ಯೂಸ್,ಕೇಸರಿ ಬಾತ್, ಹಲ್ವಾ ವಿತರಿಸಿದರು.
ಹುಳಿಯಾರಿನಲ್ಲಿ ಈದ್-ಮಿಲಾದ್ ಹಬ್ಬದ ಅಂಗವಾಗಿ ನಡೆದ ಮೆರವಣಿಯಲ್ಲಿ ಯುವಸಂಘಟನೆಯವರು ತಯಾರಿಸಿದ್ದ ಸಿಹಿಖಾದ್ಯ ಹಾಗೂ ಜ್ಯೂಸ್ ಸಾರ್ವಜನಿಕರಿಗೆ ವಿತರಿಸಿದರು.

ಹಬ್ಬದ ಅಂಗವಾಗಿ ಮಸೀದಿಗಳನ್ನು ವಿದ್ಯುತ್ ದೀಪದಿಂದ ಅಲಂಕರಿಸಿದ್ದರಲ್ಲದೆ ಸಮುದಾಯದವರಿಗಾಗಿ ಶಾದಿಮಹಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಉಳ್ಳವರು ಬಡವರಿಗೆ ಆಹಾರ, ಬಟ್ಟೆಬರೆ ದಾನ ಮಾಡಿದರು. ಪುಟ್ಟಪುಟ್ಟ ಮಕ್ಕಳು ಪೈಗಂಬರರ ವೇಷ ತೊಟ್ಟು ಸಂಭ್ರಮಿಸುತ್ತಿದ್ದರು. ಯಾವುದೇ ಅವಘಡ ಸಂಭವಿಸದಂತೆ ಮಸೀದಿ ಪ್ರದೇಶಗಳಲ್ಲಿ ಹಾಗೂ ಮೆರವಣೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಿದ್ದರು.








ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...