ಹುಳಿಯಾರು ಪಟ್ಟಣ ಸೇರಿದಂತೆ ಹೋಬಳಿಯ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಛೇರಿಗಳಲ್ಲಿ ಸೋಮವಾರ ೬೬ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಶಿಸ್ತುಬದ್ದವಾಗಿ ಆಚರಿಸಲಾಯಿತು.
ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಧ್ವಜವಂದನೆ ಸಲ್ಲಿಸುತ್ತಿರುವುದು |
ಪಟ್ಟಣದ ವಾಸವಿ ಶಾಲೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ಲಕ್ಷ್ಮಿರಾಜ್ ಧ್ವಜಾರೋಹಣ ನೆರವೇರಿಸಿದರೆ, ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ನ್ಯಾಯಾಧೀಶರಾದ ರೇಖಾ ನೆರವೇರಿಸಿ ಗಣರಾಜ್ಯೋತ್ಸವ ಮಹತ್ವವನ್ನು ತಿಳಿಸಿದರು. ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯ ಬಿಳಿಗೆರೆ ಕೃಷ್ಣಮೂರ್ತಿ , ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಚಾರ್ಯ ನಟರಾಜ್ ಧ್ವಜಾರೋಹಣ ನೆರವೇರಿಸಿದರು. ಕನಕದಾಸ ಶಾಲೆ, ಉರ್ದುಶಾಲೆ, ಜ್ಞಾನಜ್ಯೋತಿ ಸ್ಕೂಲ್, ಶಾರದಾ ಕಾನ್ವೆಂಟ್, ಎಂ.ಪಿ.ಎಸ್ ಶಾಲೆ,ಮಾರುತಿ ಶಾಲೆ,ಕೇಶವ ಶಾಲೆಗಳಲ್ಲಿ ಧ್ವಜಾರೋಹಣ ನಡೆಸಿ ಮಕ್ಕಳಿಗೆ ಸಿಹಿ ಹಂಚಿದರು. ಎಲ್ಲಾ ಶಾಲೆಗಳಲ್ಲೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕಕಾರ್ಯಕ್ರಮ ನಡೆಯಿತು.
ಸರ್ಕಾರಿ ಕಛೇರಿಗಳಾದ ನಾಢಕಛೇರಿ, ಪೊಲೀಸ್ ಠಾಣೆ , ಬೆಸ್ಕಾಂ ಕಛೇರಿ, ಸರ್ಕಾರಿ ಆಸ್ಪತ್ರೆ, ಬಿಎಸ್.ಎನ್.ಎಲ್ ಕಛೇರಿ, ಅಂಚೇ ಕಛೇರಿ, ಗ್ರಾಮ ಪಂಚಾಯ್ತಿಯಲ್ಲೂ ಧ್ವಜಾರೋಹಣ ನೆಡೆಸಿ ಸಿಹಿ ವಿತರಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ