ಹುಳಿಯಾರು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಇಂದು ಗುರುವಾರ ಚಾಲನೆ ನೀಡಲಿರುವುದಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನಾಗರಾಜ ತಿಳಿಸಿದ್ದಾರೆ.
ರಾಗಿ ಖರೀದಿ ಕೇಂದ್ರ ತೆರೆಯುವಂತೆ ಕನ್ನಡಪ್ರಭ ಪತ್ರಿಕೆಯಲ್ಲಿ ಬುಧವಾರ ಪ್ರಕಟವಾಗಿದ್ದ ವರದಿ. |
ಖರೀದಿ ಕೇಂದ್ರಕ್ಕೆ ಒತ್ತಾಯಿಸಿ ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ವರದಿಯಿಂದ ಎಚ್ಚೆತ್ತ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧಿಕಾರಿಗಳು ಖರೀದಿ ಕೇಂದ್ರ ತೆರೆಯಲು ಬುಧವಾರ ಸಿದ್ಧತೆ ಮಾಡಿಕೊಂಡಿದ್ದು , ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಖರೀದಿ ನಡೆಸಲಿದ್ದಾರೆ. ನಿಗಮದ ಜಿಲ್ಲಾ ನಿರ್ವಾಹಕ ನರಸಿಂಹಯ್ಯ, ಕೃಷಿ ಉತ್ಪನ್ನ ಮಾರುಕಟ್ಟೆಯ ಜಿಲ್ಲಾ ಉಪನಿರ್ದೇಶಕ ಡಾ. ರಾಜಣ್ಣ, ಹಾಗೂ ಮಾರುಕಟ್ಟೆ ಸಮಿತಿಯ ಸದಸ್ಯರುಗಳ ಉಪಸ್ಥಿತಿಯಲ್ಲಿ ಎಪಿಎಂಸಿ ಅಧ್ಯಕ್ಷ ಸಣ್ಣಯ್ಯ ಖರೀದಿ ಕೇಂದ್ರ ಉದ್ಘಾಟಿಸಲಿದ್ದಾರೆ. ರೈತರು ಪ್ರತಿಭಟನೆ ಹಾದಿ ಕೈಬಿಟ್ಟು ಖರೀದಿ ಕೇಂದ್ರದಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕೆಂದು ಕೋರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ