ಮಕ್ಕಳನ್ನು ಶಾಲೆಯತ್ತ ಅಕರ್ಷಿಸುವ ನಿಟ್ಟಿನಲ್ಲಿ ಸರ್ಕಾರ ಪ್ರೌಢಶಾಲಾ ಮಕ್ಕಳಿಗೆ ಉಚಿತ ಸೈಕಲ್ ನೀಡುತ್ತಿದ್ದು, ಮಕ್ಕಳು ತಾವು ಪಡೆದ ಸೈಕಲನ್ನು ಮನೆಕೆಲಸಕ್ಕೆ ಬಳಸದೆ ನಿತ್ಯ ಶಾಲೆಗೆ ಸೈಕಲ್ ನಲ್ಲೇ ಬರುವಂತೆ ತಾ.ಪಂ.ಸದಸ್ಯ ಕೆಂಕೆರೆ ನವೀನ್ ತಿಳಿಸಿದರು.
ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯ ೮ ನೇ ತರಗತಿಯ ಮಕ್ಕಳಿಗೆ ತಾ.ಪಂ.ಸದಸ್ಯ ಕೆಂಕೆರೆ ನವೀನ್ ಉಚಿತ ಸೈಕಲ್ ವಿತರಿಸಿದರು. |
ಹುಳಿಯಾರು-ಕೆಂಕೆರೆ ಸರ್ಕಾರಿ ಪ್ರೌಢಶಾಲೆಯ ೮ ನೇ ತರಗತಿಯ ಮಕ್ಕಳಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಸೈಕಲ್ ವಿತರಿಸಿ ಮಾತನಾಡಿದರು.
ಸರ್ಕಾರ ಮಕ್ಕಳ ವಿದ್ಯಾಭ್ಯಾಸಕ್ಕೆಂದು ಕೋಟ್ಯಾಂತರ ರೂ ಖರ್ಚುಮಾಡುವ ಮೂಲಕ ಬಿಸಿಯೂಟ, ಸೈಕಲ್ ವಿತರಣೆ, ಪಠ್ಯಪುಸ್ತಕ , ಸಮವಸ್ತ್ರ, ಸ್ಕಾಲರ್ ಶಿಪ್ ನೀಡುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತುಕೊಡುತ್ತಿದೆ ಎಂದರು. ಸರ್ಕಾರ ನೀಡುವ ಸೌಲಭ್ಯಗಳನ್ನು ಮಕ್ಕಳು ಪಡೆಯುವುದು ಎಷ್ಟು ಮುಖ್ಯವೋ ಅಂತೆಯೇ ತಪ್ಪದೇ ನಿತ್ಯ ಶಾಲೆಗೆ ಬರುವುದು ಅಗತ್ಯವಾಗಿದೆ ಹಾಗೂ ಪೋಷಕರು ತಮ್ಮ ಮಕ್ಕಳನ್ನು ಕೂಲಿ ಕೆಲಸಕ್ಕೆ ಕಳುಹಿಸದೆ ಶಾಲೆಗೆ ಕಳುಹಿಸಿ ಎಂದರು.
ಸೈಕಲ್ ವಿತರಣಾ ಸಮಾರಂಭದಲ್ಲಿ ಉಪಪ್ರಾಂಶುಪಾಲರಾದ ಇಂದಿರಾ, ಎಸ್ಡಿಎಂಸಿ ಉಪಾಧ್ಯಕ್ಷ ರಂಗನಕೆರೆ ಮಹೇಶ್, ಗ್ರಾ.ಪಂ.ಉಪಾಧ್ಯಕ್ಷೆ ಅಬಿದುನ್ನಿಸಾ,ಕೆಂಕೆರೆ ಗ್ರಾ.ಪಂ.ಸದಸ್ಯೆ ರೇಣುಕಮ್ಮ,ಮುಖಂಡ ಜಲಾಲ್ ಸಾಬ್,ದೈಹಿಕ ಶಿಕ್ಷಕ ಮನ್ಸೂರ್ ಅಹಮದ್ ಸೇರಿದಂತೆ ಎಸ್ಡಿಎಂಸಿ ಸದಸ್ಯರು ಹಾಗೂ ಶಾಲಾಸಿಬ್ಬಂದಿಯವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ