ಇಲ್ಲಿನ ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜುವತಿಯಿಂದ ತುಮಕೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಮಟ್ಟದ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳು ಇಂದು(ತಾ.೩) ಮಂಗಳವಾರ ಮತ್ತು ತಾ.೪ರ ಬುಧವಾರದವರೆಗೆ ಜರುಗಲಿದೆ.
ಶಾಸಕ ಸಿ.ಬಿ.ಸುರೇಶ್ ಬಾಬು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದು, ಪ್ರಾಚಾರ್ಯ ಕೃಷ್ಣಮೂರ್ತಿ ಬಿಳಿಗೆರೆ ಅವರು ಅಧ್ಯಕ್ಷತೆವಹಿಸುವರು. ತುಮಕೂರು ವಿಶ್ವವಿದ್ಯಾಲಯದ ಕ್ರೀಡಾ ಕಾರ್ಯದರ್ಶಿಗಳಾದ ಡಾ.ಎ.ಎಂ. ಮಂಜುನಾಥ್ , ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್,ತಾ.ಪಂ.ಸದಸ್ಯ ನವೀನ್, ಗ್ರಾ.ಪಂ.ಸದಸ್ಯ ರಂಗನಾಥ್, ಸಿಡಿಸಿ ಸದಸ್ಯ ಅಶೋಕ್ ಅತಿಥಿಯಾಗಿ ಆಗಮಿಸಲಿರುವುದಾಗಿ ದೈಹಿಕ ಶಿಕ್ಷಣಸಂಯೋಜಕ ಶಿವಯ್ಯ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ