ಹುಳಿಯಾರು : ಪಟ್ಟಣ ಸೇರಿದಂತೆ ಹೋಬಳಿಯ ವಿವಿಧ ಗ್ರಾಮಗಳ ಅಂಗನವಾಡಿ ಕೇಂದ್ರದಲ್ಲಿ (ತಾ.೨೩) ಭಾನುವಾರ ೨ನೇ ಹಂತದ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಲಿದ್ದು, ೫ ವರ್ಷ ಒಳಪಟ್ಟ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ರೋಟರಿ ಅಧ್ಯಕ್ಷ ಈ.ರವೀಶ್ ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆಯಿಂದ ಸಂಜೆವರೆಗೆ ಲಸಿಕೆ ಹಾಕುವ ಕಾರ್ಯ ನಡೆಯಲಿದ್ದು ಪಟ್ಟಣದ ಬಸ್ ನಿಲ್ದಾಣ, ಸರ್ಕಾರಿ ಆಸ್ಪತ್ರೆ, ಇಂದಿರಾನಗರ, ಮಾರುತಿನಗರದ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಹೋಬಳಿಯ ವಿವಿಧ ಹಳ್ಳಿಗಳ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ಹಾಕಲಿದ್ದು ಪೋಷಕರು ತಮ್ಮ ಮಗುವನ್ನು ಲಸಿಕಾ ಕೇಂದ್ರದಲ್ಲಿಗೆ ತಪ್ಪದೆ ಕರೆತಂದು ಲಸಿಕೆ ಹಾಕಿಸುವಂತೆ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ