ಹುಳಿಯಾರು ಪಟ್ಟಣದ ಆರ್ಯವೈಶ್ಯ ಮಂಡಳಿ, ಮಹಿಳಾ ಸಂಘ, ಕನ್ನಿಕಾಪರಮೇಶ್ವರಿ ಸಹಕಾರ ಸಂಘ , ವಾಸವಿ ವಿದ್ಯಾಸಂಸ್ಥೆ ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಯೋಗದಲ್ಲಿ ಗುರುವಾರ ವಾಸವಿ ಕಲ್ಯಾಣ ಮಂದಿರದಲ್ಲಿ ಅಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿಯಾಗಿ ನಡೆಯಿತು.
ಹುಳಿಯಾರಿನ ಆರ್ಯವೈಶ್ಯ ಮಂಡಳಿ ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಯೋಗದಲ್ಲಿ ವಾಸವಿ ಕಲ್ಯಾಣ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣ ಶಿಬಿರ ನಡೆಯಿತು. |
ಆರ್ಯವೈಶ್ಯ ಮಂಡಳಿಯ ಉಪಾಧ್ಯಕ್ಷ ಎಲ್.ಆರ್.ಚಂದ್ರಶೇಖರ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ಹೃದಯ ಸಂಬಂಧಿ, ಮೂತ್ರ ಪಿಂಡದ ಸಮಸ್ಯೆ ಸೇರಿದಂತೆ ಇನ್ನಿತರ ಖಾಯಿಲೆಗಳಿಗೆ ಜನ ಹೆಚ್ಚಿನ ಹಣ ಖರ್ಚುಮಾಡಲಾಗದೆ ತೊಂದರೆಗೆ ಸಿಲುಕಿಕೊಳ್ಳುತ್ತಿದ್ದಾರೆ. ಅಂತಹವರಿಗೆ ನೆರವಾಗುವ ದೃಷ್ಠಿಯಿಂದ ಈ ಶಿಬಿರ ಅಯೋಜಿಸಿದ್ದು ಶಿಬಿರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದು ಶಿಬಿರದ ಯಶಸ್ಸಿಗೆ ನೆರವಾಗಿದ್ದಾರೆಂದರು.
ಬೆಳಿಗ್ಗೆಯಿಂದ ಪ್ರಾರಂಭವಾದ ಶಿಬಿರಕ್ಕೆ ಪಟ್ಟಣ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಿಂದ ಸಾಕಷ್ಟು ಜನ ಆಗಮಿಸಿದ್ದು ಸಂಜೆಯವರೆಗೂ ನಡೆದ ಶಿಬಿರದಲ್ಲಿ ನೂರಾರು ಮಂದಿಯನ್ನು ತಪಾಸಣೆಗೊಳಪಡಿಸಲಾಯಿತು. ಶಿಬಿರದಲ್ಲಿ ಹೃದಯ ಸಂಬಂಧಿ ಕಾಯಿಲೆಗಳು, ಮೂತ್ರಪಿಂಡದಲ್ಲಿ ಕಲ್ಲು, ನರಗಳ ದೌರ್ಬಲ್ಯಕ್ಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಿದರಲ್ಲದೆ ಇಸಿಜಿ, ಸ್ಕ್ಯಾನಿಂಗ್ , ಬಿಪಿ ಪರೀಕ್ಷೆ ಸೇರಿದಂತೆ ಇನ್ನಿತರ ಖಾಯಿಲೆಗಳಿಗೆ ಸಂಬಂಧಿಸಿದ ಪರೀಕ್ಷೆ ನಡೆಸಲಾಯಿತು.
ಈ ವೇಳೆ ಮಂಡಳಿಯ ಅಧ್ಯಕ್ಷ ಎಂ.ಎಸ್.ನಟರಾಜ್ ಗುಪ್ತಾ, ಉಪಾಧ್ಯಕ್ಷ ನಾಗರಾಜು ಸೇರಿದಂತೆ ಸಂಘದ ಸದಸ್ಯರು, ಸಪ್ತಗಿರಿ ಆಸ್ಪತ್ರೆ ನುರಿತ ವೈದ್ಯರು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ