ಚಿಕ್ಕನಾಯಕನಹಳ್ಳಿ ತಾಲ್ಲೂಕ್ ನ ಕಾಂಗ್ರೆಸ್ ಮುಂಖಂಡರಾದ ಸಾಸಲು ಸತೀಶ್ ಅವರನ್ನು ತುಮಕೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಆಯ್ಕೆ ಮಾಡಲು ಕಾರಣಿಕರ್ತರಾದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರನ್ನು ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು.
ಸಾಸಲು ಸತೀಶ್ ಅವರನ್ನು ತುಮಕೂರು ವಿವಿಯ ಸಿಂಡಿಕೇಟ್ ಸದಸ್ಯರನ್ನಾಗಿ ಆಯ್ಕೆ ಮಾಡಲು ಕಾರಣಿಕರ್ತರಾದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರನ್ನು ತಾಲ್ಲೂಕಿನ ಮತ್ತು ಹುಳಿಯಾರಿನ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. |
ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಭಿವೃದ್ದಿ ವಿಷಯದಲ್ಲಿ ಹಿಂದೆ ಉಳಿದಿದ್ದು ತಾಲ್ಲೂಕಿನ ಅಭಿವೃದ್ದಿಗೆ ಹೆಚ್ಚು ಒತ್ತು ಕೊಡುವ ಮೂಲಕ ತಾಲ್ಲೂಕನ್ನು ಪ್ರಗತಿಪಥದತ್ತ ಕೊಂಡೊಯ್ಯುವಂತೆ ಮನವಿ ಮಾಡಿದರು. ಈ ವೇಳೆ ಸಾಸಲು ಸತೀಶ್, ತುಮಕೂರು ಜಿಲ್ಲಾ ಕಾಂಗ್ರೆಸ್ ಸದಸ್ಯ ವೈ.ಸಿ.ಸಿದ್ದರಾಮಯ್ಯ, ಯೂತ್ ಕಾಂಗ್ರೆಸ್ ಅಧ್ಯಕ್ಷ ಹೊಸಹಳ್ಳಿ ಅಶೋಕ್, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಕೆಂಕೆರೆ ಶಿವಕುಮಾರ್ ಸೇರಿದಂತೆ ಇನ್ನಿತರರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ