ತುಮಕೂರು ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘ , ಮಧುಗಿರಿ ಶೈಕ್ಷಣಿಕ ಜಿಲ್ಲೆ, ಜಿಲ್ಲಾಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ , ಜಿಲ್ಲಾ ತರಬೇತಿ ಕೇಂದ್ರ ತುಮಕೂರು ಇವರುಗಳ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಾರ್ಷಿಕ ತಯಾರಿ ಸಿದ್ದತೆಗೆ ಸಂಬಂಧಿಸಿದಂತೆ ಅಮೋಘ ಟಿವಿಯಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ.
ಸ್ಪೂರ್ತಿ ಕಾರ್ಯಕ್ರಮದಡಿಯಲ್ಲಿ ತಾ.೮ ರ ಭಾನುವಾರದಿಂದ ತಾ.೨೦ರ ವರೆಗೆ ಪ್ರತಿದಿನ ರಾತ್ರಿ ೮ ರಿಂದ ೯ರವರೆಗೆ ಒಂದು ಗಂಟೆಕಾಲ ಹತ್ತನೇ ತರಗತಿ ಮಕ್ಕಳಿಗೆ ಪಠ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಕುರಿತು ಸಂಕ್ಷಿಪ್ತ ಮಾಹಿತಿಯನ್ನು ಪ್ರಸಾರ ಮಾಡಲಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮವನ್ನು ವೀಕ್ಷಿಸುವಂತೆ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕ ಸಂಘದ ಕಾರ್ಯದರ್ಶಿ ಕೆ.ಎಂ.ಗಂಗಾದರಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ