ಇಲ್ಲಿನ ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬೆಂಗಳೂರಿನ ಬಿ.ಕೃಷ್ಣಪ್ಪ ಟ್ರಸ್ಟ್, ರೈತಸಂಘದ ಸಹಯೋಗದಲ್ಲಿ " ನೀರು-ನೀರು-ನೀರು, ನೀರೆಲ್ಲವೂ ತೀರ್ಥ- ತೀರ್ಥವೆಲ್ಲವೂ ನೀರು " ವಿಷಯದಡಿ ರಾಜ್ಯಮಟ್ಟದ ವಿಚಾರ ಸಂಕಿರಣ ತಾ.೧೯ರ ಗುರುವಾರ ಬೆಳಿಗ್ಗೆ ನಡೆಯಲಿದೆ.
ವಿಚಾರ ಸಂಕಿರಣವನ್ನು ಸಂಸದ ಎಸ್.ಪಿ.ಮುದ್ದಹನುಮೇಗೌಡ ಉದ್ಘಾಟಿಸಲಿದ್ದು, ಶಾಸಕ ಸಿ.ಬಿ.ಸುರೇಶ್ ಬಾಬು ಅಧ್ಯಕ್ಷತೆವಹಿಸುವರು. ಭೂಗರ್ಭ ಶಾಸ್ತ್ರಜ್ಞರಾದ ದೇವರಾಜರೆಡ್ಡಿಅವರು ಮಳೆನೀರು ಕೊಯ್ಲು-ಕೃತಕ ಬರಕ್ಕೆ ಶಾಶ್ವತ ಪರಿಹಾರ" ವಿಷಯ ಕುರಿತ ಉಪನ್ಯಾಸ ನೀಡಲಿದ್ದಾರೆ.. ಇದೇ ದಿನ ಮಧ್ಯಾಹ್ನ ಪ್ರಾಚಾರ್ಯ ಬಿಳಿಗಿರಿ ಕೃಷ್ಣಮೂರ್ತಿ ಹಾಗೂ ರುದ್ರಪ್ಪ ಅವರ ಉಪಸ್ಥಿತಿಯಲ್ಲಿ ತಿಪಟೂರಿನ ಅಕ್ಷಯಕಲ್ಪದ ಎಂಡಿ ಆಗಿರುವ ಡ.ಜಿ.ಎಸ್.ಎಸ್.ರೆಡ್ಡಿ ಅವರಿಂದ " ಮರಕ್ಕೆ ಬೇಸಾಯ-ಮೈಲನಹಳ್ಳಿ ಪ್ರಯೋಗ" ವಿಷಯ ಕುರಿತು ಉಪನ್ಯಾಸ ಅಯೋಜಿಸಲಾಗಿದೆ. ಈ ಭಾಗದ ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಾಹಿತಿ ಪಡೆಯುವಂತೆ ಪ್ರಾಚಾರ್ಯ ಬಿಳಿಗೆರೆ ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ