ಚಿ.ನಾ.ಹಳ್ಳಿ ಕೇತ್ರದ ಜನಪ್ರಿಯ ಶಾಸಕರಾದ ಸಿ.ಬಿ.ಸುರೇಶ್ ಬಾಬು ಅವರ ಹುಟ್ಟುಹಬ್ಬವನ್ನು ಹುಳಿಯಾರು ಹಾಗೂ ಚಿಕ್ಕನಾಯಕನಹಳ್ಳಿಯಲ್ಲಿ ತಾ.೧೬ ರ ಸೋಮವಾರ ಅದ್ದೂರಿಯಾಗಿ ಆಚರಿಸಲಿದ್ದಾರೆ.
![]() |
ಶಾಸಕ ಸಿ.ಬಿ.ಸುರೇಶ್ ಬಾಬು |
ಅಲ್ಲದೆ ಅಭಿಮಾನಿ ಬಳಗದಿಂದ ಇದೇ ದಿನ ಚಿಕ್ಕನಾಯಕನಹಳ್ಳಿಯ ಸರ್ಕಾರಿ ಪ್ರೌಢಶಾಲಾವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು ಇದಕ್ಕಾಗಿ ಪ್ರತಿಯೊಂದು ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆ ಬಳಿ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ಶಿಬಿರದಲ್ಲಿ ನುರಿತ ವೈದ್ಯರು ಆಗಮಿಸಲಿದ್ದು, ಸ್ಕ್ಯಾನಿಂಗ್, ಇಸಿಜಿ, ರಕ್ತ ಮತ್ತು ಮೂತ್ರ ಪರೀಕ್ಷೆ, ಮಧುಮೇಹ ಪರೀಕ್ಷೆ ಸೇರಿದಂತೆ ಇನ್ನಿತ ಪರೀಕ್ಷೆಗಳನ್ನು ನಡೆಸುವುದರ ಜೊತೆಗೆ ಉಚಿತ ಔಷಧಿಗಳನ್ನು ನೀಡಲಿದ್ದು, ಸ್ತ್ರೀಯರಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ನುರಿತ ವೈದ್ಯರಿಂದ ಚಿಕಿತ್ಸೆ ಹಾಗೂ ಸಲಹೆ ನೀಡಲಿದ್ದಾರೆ. ವಿಕಲಚೇತನರ ಸಮಾವೇಶ ಹಾಗೂ ಸಾಮೂಹಿಕ ಮಡಿಲು ತುಂಬುವ ಕಾರ್ಯ ಸಹ ನಡೆಯಲಿದ್ದು ಹುಳಿಯಾರು ಸೇರಿದಂತೆ ಸುತ್ತಮುತ್ತಲ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಹುಳಿಯಾರಿನ ಸುರೇಶ್ ಬಾಬು ಅಭಿಮಾನಿ ಬಳಗದ ನಂದಿಹಳ್ಳಿ ಶಿವಣ್ಣ, ಜಲಾಲ್ ಸಾಬ್, ಗೌಡಿ ರಂಗನಾಥ್, ಶಂಕರೇಗೌಡ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ