ಪ್ರಸ್ತುತದಲ್ಲಿ ಅನೇಕ ಸರ್ಕಾರಿ ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ವಿರಳವಾಗುತ್ತಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯು ಗಮನ ಹರಿಸಬೇಕು. ಪ್ರತಿಯೊಂದು ಸರ್ಕಾರಿ ಶಾಲೆಯಲ್ಲಿ ಸಾಂಸ್ಕೃತಿಕಕಾರ್ಯಕ್ರಮಗಳನ್ನು ಕಡ್ಡಾಯ ಮಾಡಬೇಕು ಎಂದು ಜಿ.ಪಂ.ಸದಸ್ಯೆ ಮಂಜುಳಾಗವಿರಂಗಯ್ಯ ತಿಳಿಸಿದರು.
ಹುಳಿಯಾರಿನ ಎಂಪಿಎಸ್ ಶಾಲೆಯ ೨೦೧೪-೧೫ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಜಿ.ಪಂ.ಸದಸ್ಯೆ ಮಂಜುಳಾ ಉದ್ಘಾಟಿಸಿದರು. |
ಹುಳಿಯಾರಿನ ಎಂಪಿಎಸ್ ಶಾಲೆಯ ಅಯೋಜಿಸಿದ್ದ ೨೦೧೪-೧೫ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಖಾಸಗಿ ಶಾಲೆಯವರು ನಾಮೇಲೂ, ತಾಮೇಲೂ ಎಂಬಂತೆ ಸಾಂಸ್ಕೃತಿಕಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಆದರೆ ಸರ್ಕಾರಿ ಶಾಲೆಗಳಲ್ಲಿ ಇಂತಹ ಆಚರಣೆಗಳು ಕಡಿಮೆ ಎಂದು ವಿಷಾಧಿಸಿದರು. ಪಠ್ಯದಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಆಯೋಜಿಸುವುದರಿಂದ ಮಕ್ಕಳಲ್ಲಿನ ಪ್ರತಿಭೆಯನ್ನು ಗುರ್ತಿಸಬಹುದಾಗಿದೆ ಹಾಗೂ ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆಯನ್ನು ಕಲ್ಪಿಸಿದಂತಾಗುತ್ತದೆ ಎಂದರು.ಸರ್ಕಾರ ಉಚಿತ ಶಿಕ್ಷಣದ ಜೊತೆಗೆ ಪುಸ್ತಕ,ಬಟ್ಟೆ, ಬಿಸಿಯೂಟ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನೀಡಿದ್ದು ಮಕ್ಕಳು ಚೆನ್ನಾಗಿ ಓದಬೇಕು ಎಂದರು.
ಸಿ.ಆರ್.ಪಿ ಪ್ರೇಮಲೀಲಾ ಕ್ರೀಡಾ ವಿಜೇತಮಕ್ಕಳಿಗೆ ಬಹುಮಾನ ವಿತರಿಸಿದರು. ಶಾಲೆಯ ಮುಖ್ಯಶಿಕ್ಷಕ ನಂದವಾಡಗಿ,ಮುಖಂಡ ಜಲಾಲ್ ಸಾಬ್, ಎಸ್ಡಿಎಂಸಿಯವರು ಹಾಗೂ ಶಾಲಾ ಶಿಕ್ಷಕರು, ಸಿಬ್ಬಂದಿಯವರು ಉಪಸ್ಥಿತರಿದ್ದರು. ಮಕ್ಕಳು ಬಗೆಬಗೆ ಸಾಂಸ್ಕೃತಿಕಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ