ವಿಷಯಕ್ಕೆ ಹೋಗಿ

ಹುಳಿಯಾರು : ರಾಮನವಮಿ ಪ್ರಯುಕ್ತ ಪಾನಕಪನಿವಾರ ಸಂಭ್ರಮ

ಹುಳಿಯಾರು ಪಟ್ಟಣದ ವಿವಿಧ ದೇವಾಲಯಗಳಲ್ಲಿ ಹಾಗೂ ಸುತ್ತಮುತ್ತಲ ಸೀಗೆಬಾಗಿ,ಹೊಸಹಳ್ಳಿ, ಕೆಂಕೆರೆ, ತಿರುಮಲಾಪುರ,ದಸೂಡಿ,ನಂದಿಹಳ್ಳಿ ಗ್ರಾಮಗಳ ದೇವಾಲಯಗಳಲ್ಲಿ ಶನಿವಾರ ರಾಮನವಮಿಯ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನಡೆಸಿ ಪಾನಕ,ಮಜ್ಜಿಗೆ ವಿತರಿಸುವ ಮೂಲಕ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಹುಳಿಯಾರಿನಲ್ಲಿ ರಾಮನವಮಿ ಅಂಗವಾಗಿ ಲಿಂಗಪ್ಪನಪಾಳ್ಯದ ಶ್ರೀರಾಮದೇವರನ್ನು ಗ್ರಾಮದೇವತೆಗಳಾದ ದುರ್ಗಮ್ಮ, ಹುಳಿಯಾರಮ್ಮನವರೊಂದಿಗೆ ಮೆರವಣೆಯಲ್ಲಿ ಆಂಜನೇಯಸ್ವಾಮಿ ದೇವಾಲಯಕ್ಕೆ ಕರೆದೊಯ್ಯಲಾಯಿತು.
ಪಟ್ಟಣದ ಆಂಜನೇಯಸ್ವಾಮಿ ದೇವಾಲಯದಲ್ಲಿ ಶನಿವಾರ ಮುಂಜಾನೆ ಪೂಜೆ, ಹೋಮ ಹಾಗೂ ಮಹಾಮಂಗಳಾರತಿ ನಡೆಸಲಾಯಿತು. ಆಂಜನೇಯಸ್ವಾಮಿಗೆ ಭಕ್ತರೊಬ್ಬರು ಬೆಳ್ಳಿಯ ವಜ್ರಾಂಗಿ ಸಮರ್ಪಿಸಿದ ಹಿನ್ನಲೆಯಲ್ಲಿ ಅರ್ಚಕ ಶ್ರೀಧರ್ ಅವರಿಂದ ಹೋಮಹವನಾದಿಗಳು ನಡೆಯಿತು. ಇದೇ ಸಂದರ್ಭದಲ್ಲಿ ಬೆಲುಗೂರಿನ ಬಿಂಧುಮಾಧವ ಸ್ವಾಮಿಯವರು ದೇವಾಲಯಕ್ಕೆ ಆಗಮಿಸಿ ಭಕ್ತಾಧಿಗಳಿಗೆ ಆಶೀರ್ವಚನ ನೀಡಿದರು. ರಾಮಭಜನೆ ನಂತರ ದೇವಾಲಯ ಸಮಿತಿ ಹಾಗೂ ಜೈ ಮಾರುತಿ ಯುವಕ ಸೇವಾ ಛಾರಿಟಬಲ್ ಟ್ರಸ್ಟ್ ವತಿಯಿಂದ ಭಕ್ತಾಧಿಗಳಿಗೆ ಪಾನಕ,ಮಜ್ಜಿಗೆ,ಕಡಲೆಕಾಳು ಉಸ್ಲಿ ವಿತರಿಸಲಾಯಿತು.
 ಹುಳಿಯಾರಿನ ಆಂಜನೇಯಸ್ವಾಮಿ ದೇವಾಲಯದಲ್ಲಿ ರಾಮನವಮಿ ಅಂಗವಾಗಿ ಜೈ ಮಾರುತಿ ಯುವಕ ಸೇವಾ ಛಾರಿಟಬಲ್ ಟ್ರಸ್ಟ್ ನ ಯುವಕರು ಪಾನಕ,ಮಜ್ಜಿಗೆ ವಿತರಿಸಿದರು.
ಪಟ್ಟಣದ ಸೀತಾರಾಮ ಕಲ್ಯಾಣಮಂದಿರದಲ್ಲಿ ವಿಪ್ರಸಂಘದಿಂದ ಶ್ರಿರಾಮಮೂರ್ತಿಗೆ ಪೂಜೆ ಸಲ್ಲಿಸಿ,ಮಹಿಳ ಸಂಘದಿಂದ ಭಜನೆ ಮಾಡಿ,ಗೊಜ್ಜವಲಕ್ಕಿ, ಪಾನಕ,ಮಜ್ಜಿಗೆ ವಿತರಿಸಲಾಯಿತು. ವಾಸವಿ ದೇವಾಲಯದಲ್ಲಿ ಆರ್ಯವೈಶ್ಯ ಮಂಡಳಿಯವರಿಂದ, ಅನಂತಶಯನ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವಾಲಯ ಸಮಿತಿಯವರಿಂದ ರಾಮನವಮಿ ಆಚರಿಸಿ ಪಾನಕ,ಕೋಸಂಬರಿ ವಿತರಿಸಲಾಯಿತು.

ರಾಮನವಮಿಯನ್ನು ಊರಹಬ್ಬವಾಗಿ ಇಂದಿಗೂ ಆಚರಿಸಿಕೊಂಡು ಬರುತ್ತಿರುವ ಲಿಂಗಪ್ಪನಪಾಳ್ಯದಿಂದ ಪ್ರತೀತಿಯಂತೆ ಈ ವರ್ಷವೂ ಸಹ ಶ್ರೀರಾಮದೇವರ ಉತ್ಸವ ಮೂರ್ತಿಯನ್ನು ಹುಳಿಯಾರಿನ ಗ್ರಾಮದೇವತೆಗಳಾದ ದುರ್ಗಮ್ಮ,ಹುಳಿಯಾರಮ್ಮನವರೊಂದಿಗೆ ಬಸವನ ನಗಾರಿ ಸಮೇತ ಸಕಲವಾದ್ಯದೊಂದಿಗೆ ರಂಗನಾಥಸ್ವಾಮಿ ಭಜನಾ ತಂಡದವರ ರಾಮಭಜನಾ ಗಾಯನದೊಂದಿಗೆ ಆಂಜನೇಯಸ್ವಾಮಿ ದೇವಾಲಯಕ್ಕೆ ಕರೆತರಲಾಯಿತು. ನಂತರ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿ ಪಾನಕ ವಿತರಿಸಲಾಯಿತು. ನಂತರ ಸ್ವಾಮಿಯವರನ್ನು ಮೆರವಣೆಯಲ್ಲಿ ಶನೇಶ್ವಸ್ವಾಮಿ,ರಂಗನಾಥಸ್ವಾಮಿ ದೇವಾಲಯಗಳಿಗೆ ಕರೆದೊಯ್ದು ಅಲ್ಲಿಯೂ ಸಹ ಪೂಜೆ ಸಲ್ಲಿಸಿ ಪಾನಕಪನಿವಾರ ವಿತರಣೆ ನಡೆಸಲಾಯಿತು. ನಂತರ ಉರಿ ಬಿಸಿಲನ್ನು ಲೆಕ್ಕಿಸದೆ ದೇವರುಗಳನ್ನು ಲಿಂಗಪ್ಪನಪಾಳ್ಯಕ್ಕೆ ವಾಪಸ್ಸು ಕರೆದೊಯ್ಯಲಾಯಿತು. ಈ ವೇಳೆ ಪಾಳ್ಯದ ದುರ್ಗಪ್ಪ, ಬೀರಪ್ಪ,ನಾಗರಾಜು, ಜೈ ಮಾರುತಿ ಯುವಕ ಸೇವಾ ಛಾರಿಟಬಲ್ ಟ್ರಸ್ಟ್ ನ ಅಶೋಕ್ ಬಾಬು, ಮೆಡಿಕಲ್ ಚನ್ನಬಸವಯ್ಯ, ದಯಾನಂದ್, ರಾಜು, ಮಂಜುನಾಥ್, ಸತೀಶ್, ಬಡಗಿ ರಾಮಣ್ಣ,ಲೋಕೇಶ್, ಮನು, ಎಸ್.ಬಿ.ಎಂ ಗ್ರೋಪ್ಸ್ ನ ಸದಸ್ಯರು ಸೇರಿದಂತೆ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.