ಹುಳಿಯಾರು ಪಟ್ಟಣದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ವಿಪ್ರ ಸಂಘದಿಂದ,ವಾಸವಿ ದೇವಾಲಯದಲ್ಲಿ ಆರ್ಯವೈಶ್ಯ ಮಂಡಳಿಯಿಂದ,ಆಂಜನೇಯಸ್ವಾಮಿ ದೇವಾಲಯದಲ್ಲಿ ಜೈ ಮಾರುತಿ ಯುವಕ ಸಂಘದಿಂದ,ರಂಗನಾಥಸ್ವಾಮಿ ದೇವಾಲಯದಲ್ಲಿ ರಾಮನವಮಿ ಆಚರಣೆ ಅದ್ಧೂರಿಯಾಗಿ ನಡೆಯಲಿದೆ.
ಪಟ್ಟಣದ ಆಂಜನೇಯಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ ಆಂಜನೇಯಸ್ವಾಮಿಗೆ ಅಭಿಷೇಕ ನಂತರ ಗ್ರಾಮದೇವತೆಗಳಾದ ಹುಳಿಯಾರಮ್ಮ, ದುರ್ಗಮ್ಮ ಹಾಗೂ ಲಿಂಗಪ್ಪನಪಾಳ್ಯದ ಶ್ರೀರಾಮದೇವರುಗಳ ಆಗಮನದೊಂದಿಗೆ ಮಧ್ಯಾಹ್ನ ೧೨ಕ್ಕೆ ಮಹಾಮಂಗಳಾರತಿ ನಡೆದು ಪಾನಕಪನಿವಾರ ಸೇವೆ ನಡೆಯಲಿದೆ. ಸಂಜೆ ೬ಕ್ಕೆ ಬೆಂಗಳೂರಿನ ನಟರಾಜ್ ಎಂಟರ್ ಟ್ರೈನರ್ಸ್ ತಂಡದವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಿವಿಧ ಗ್ರಾಮಗಳಲ್ಲಿ : ಸಮೀಪದ ಲಿಂಗಪ್ಪನಪಾಳ್ಯದ ಶ್ರೀರಾಮದೇವಾಲಯದಲ್ಲಿ,ಕೆಂಕೆರೆಯ ಶ್ರೀ ಆಂಜನೇಯಸ್ವಾಮಿ ದೇವಾಲಯ,ಹೊಸಹಳ್ಳಿ ಆಂಜನೇಯಸ್ವಾಮಿ ದೇವಾಲಯ,ತಿರುಮಾಲಪುರದ ಆಂಜನೇಯಸ್ವಾಮಿ ದೇವಾಲಯದಲ್ಲಿ,ನಂದಿಹಳ್ಳಿಯ ನಂದಿಬಸವೇಶ್ವರಸ್ವಾಮಿ ದೇವಾಲಯದಲ್ಲಿ,ಸೀಗೆಬಾಗಿಯ ವರದರಾಜಸ್ವಾಮಿ ದೇವಾಲಯದಲ್ಲಿ,ದಸೂಡಿಯ ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರಾಮನವಮಿ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ನೂರೊಂದೆಡೆ ಸೇವೆ,ಪಾನಕಫಲಹಾರ ವಿನಿಯೋಗವಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಿತಿಯವರು ಕೋರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ