ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದಲ್ಲಿ ಶ್ರೀಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿವತಿಯಿಂದ ಶ್ರೀ ಶನೇಶ್ವರಸ್ವಾಮಿಯ ೬೧ನೇ ವರ್ಷದ ಪಾನಕಪನಿವಾರ ಸೇವೆ (ತಾ.೨೦) ಶುಕ್ರವಾರ ಬೆಳಿಗ್ಗೆ ನಡೆಯಲಿದೆ.
ಇದರ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಶ್ರೀಶನೇಶ್ವರಸ್ವಾಮಿ ಹಾಗೂ ಗ್ರಾಮದೇವತೆ ಶ್ರೀ ಕಾಳಮ್ಮ ದೇವರುಗಳ ಉತ್ಸವ ಊರಿನ ಪ್ರಮುಖ ಬೀದಿಗಳಲ್ಲಿ ನಡೆಯಲಿದ್ದು ನಂತರ ದೇವರುಗಳ ಸಮ್ಮುಖದಲ್ಲಿ ನವಗ್ರಹಹೋಮ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ. ಮಹಾಮಂಗಳಾರತಿಯ ನಂತರ ಆಗಮಿಸಿದ ಭಕ್ತಾಧಿಗಳಿಗೆ ಪಾನಕಪನಿವಾರ ವಿತರಿಸಲಿದ್ದು ಗ್ರಾಮದ ಸುತ್ತಮುತ್ತಲಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ನಾಟಕ ಮಂಡಳಿಯವರು ಕೋರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ