ವಿಷಯಕ್ಕೆ ಹೋಗಿ

ಗ್ರಾ.ಪಂ ಕಟ್ಟಡ ಉದ್ಘಾಟನೆಗೆ ಹಾಜರಾಗದ ಜನಪ್ರತಿನಿಧಿಗಳು ,ಅಧಿಕಾರಿಗಳು ಸಂಜೆ ಉದ್ಘಾಟನಾ ಶಾಸ್ತ್ರ ಮುಗಿಸಿದ ತಾ.ಪಂ.ಅಧ್ಯಕ್ಷೆ

ಹುಳಿಯಾರು  ಹೋಬಳಿ ಯಳನಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ್ದ ಗ್ರಾ.ಪಂ.ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆ ಗುರುವಾರ ಬೆಳಿಗ್ಗೆ ನಡೆಯಬೇಕಿದ್ದು, ಸಂಜೆಯಾದರೂ ಆಹ್ವಾನಪತ್ರಿಕೆಯಲಿದ್ದ ಜನಪ್ರತಿನಿಧಿಗಳು ಯಾರು ಆಗಮಿಸದೆ ಕಾದುಕಾದು ಬೇಸತ್ತು ಸಂಜೆ ೬ರ ಸಮಯದಲ್ಲಿ ತಾ.ಪಂ.ಅಧ್ಯಕ್ಷೆಯಿಂದ ಉದ್ಘಟನಾಶಾಸ್ತ್ರ ನೆರವೇರಿಸಿದ್ದು ಇಂದಿನ ಘಟನೆ ತಾಲ್ಲೂಕಿನ ಗಡಿಭಾಗದ ಗ್ರಾಮಗಳ ಬಗ್ಗೆ ಆಡಳಿತಶಾಹಿಗಳ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.
ಯಳನಡು ಗ್ರಾ.ಪಂ.ನ ನೂತನಕಟ್ಟಡದ ಉದ್ಘಾಟನೆಯಲ್ಲಿ ಜನಪ್ರತಿನಿಧಿಗಳ ಗೈರಿನಲ್ಲಿ ಉದ್ಘಾಟನೆ ನೆರವೇರಿಸಿದ ತಾ.ಪಂ.ಅಧ್ಯಕ್ಷೆ ಲತಾ.


ಹುಳಿಯಾರು ಹೋಬಳಿಯ ಯಳನಡು ಗ್ರಾಮ ಗಡಿಭಾಗದಲಿದ್ದು ಒಟ್ಟು ೧೪ ಲಕ್ಷ ವೆಚ್ಚದಲ್ಲಿ ಗ್ರಾ.ಪಂ.ಕಟ್ಟಡ ನಿರ್ಮಿಸಲಾಗಿತ್ತು. ಸರ್ಕಾರಿ ಕಾರ್ಯಕ್ರಮವಾದ್ದರಿಂದ ಶಾಸಕರು ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಿ ಉದ್ಘಾಟನಾ ದಿನವನ್ನು ನಿಗದಿ ಪಡಿಸಲಾಗಿತ್ತು. ಶಿಷ್ಟಾಚಾರದಂತೆ ಸಚಿವರು,ಹಾಲಿಶಾಸಕರು, ಸಂಸದರು,ಇಬ್ಬರು ವಿಧಾನಪರಿಷತ್ ಸದಸ್ಯರು,ಜಿ.ಪಂ.ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಹೀಗೆ ಪ್ರತಿಯೊಬ್ಬರನ್ನು ಆಹ್ವಾನಪತ್ರಿಕೆಯಲ್ಲಿ ಮುದ್ರಿಸಿ ಎಲ್ಲರನ್ನು ಕಂಡು ಆಹ್ವಾನ ನೀಡಲಾಗಿತ್ತು.
ಯಳನಡು ಗ್ರಾ.ಪಂ.ನ ನೂತನಕಟ್ಟಡದ ಉದ್ಘಾಟನೆಗೆ ಸಿದ್ದಪಡಿಸಿದ್ದ ವೇದಿಕೆ.
ಅದರಂತೆ ಇಂದು ಸಂಸದರು,ಶಾಸಕರ ನಿರೀಕ್ಷೆಯಲ್ಲಿ ವೇದಿಕೆಯನ್ನು ಸಿದ್ದಗೊಳಿಸಿದ್ದಲ್ಲದೆ, ಲಘು ಉಪಹಾರದ ವ್ಯವಸ್ಥೆ ಮಾಡಿಕೊಂಡಿದ್ದರು. ನಿಗದಿತ ಸಮಯ ಮೀರಿ ಗಂಟೆಗಳೇ ಕಳೆದರೂ ಸಹ ಆಗಹೀಗ ಎಂದು ನಂತರ ಪೋನ್ ಸಂಪರ್ಕಕ್ಕೆ ಯಾರೊಬ್ಬರೂ ಸಿಗದಂತಾಗಿ ಪರಿಪಾಟಲು ಪಡುವಂತಾಯಿತು.ಶಾಸಕರಿಂದಲೇ ಕಟ್ಟಡದ ಉದ್ಘಾಟನೆ ಮಾಡಿಸಬೇಕೆಂಬ ಹಂಬಲದಿಂದಿದ ಸಂಜೆಯವರೆಗೂ ಕಾದೇಕಾದರು. ಇನ್ನೇನು ಸೂರ್ಯ ಮುಳುಗಿ ಕತ್ತಲಾಗುವ ಸಮಯವಾಗಿತ್ತದೆಂದು ಅರಿತು ಕಾರ್ಯಕ್ರಮಕ್ಕೆಂದೆ ಆಗಮಿಸಿದ್ದ ತಾ.ಪಂ.ಅಧ್ಯಕ್ಷೆಯಿಂದ ಉದ್ಘಾಟನಾ ಶಾಸ್ತ್ರ ನೆರವೇರಿಸಿದರು. ಎಲ್ಲರ ವರ್ತನೆಯಿಂದ ಬೇಸತ್ತಿದ್ದ ಸಾರ್ವಜನಿಕರು ಒಬ್ಬರೂ ಇತ್ತಡೆ ತಲೆಹಾಕದೆ ಅವರಿಗಾಗಿ ಹಾಕಿದ್ದ ಛೇರ್ ಗಳು ಸಹ ಸಂಜೆಯವರೆಗೂ ಖಾಲಿಯೇ ಉಳಿದಿದ್ದವು.
ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿಯೇ ಕರಪತ್ರಗಳನ್ನು ಮಾಡಿಸಿ ಸಂಸದರಿಗೆ, ಶಾಸಕರಿಗೆ ಹಾಗೂ ಪಂಚಾಯ್ತಿಯ ಇಓ ಅವರಿಗೂ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ನೀಡಿ ಆಹ್ವಾನವಿತ್ತಿದ್ದರೂ ಸಹ ಯಾರೋಬ್ಬರು ಬಾರದಯಿದ್ದು ತಾ.ಪಂ.ಅಧ್ಯಕ್ಷರ ಹಾಗೂ ಸ್ಥಳೀಯ ಗ್ರಾ..ಪಂ.ಸದಸ್ಯರ ಅಸಮಾಧಾನಕ್ಕೆ ಕಾರಣವಾಯಿತು.
ಈ ಬಗ್ಗೆ ಬೇಸರದಿಂದಲೇ ಮಾತನಾಡಿದ ತಾ.ಪಂ.ಅಧ್ಯಕ್ಷೆ ಶ್ರೀಮತಿ ಲತಾಕೇಶವಮೂರ್ತಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಬಾರದು, ಕಾರ್ಯಕ್ರಮಕ್ಕೆ ತಡವಾಗಿ ಬರುವುದಾಗಿ ಅಥವಾ ಬರುವುದಿಲ್ಲ ಎಂದು ತಿಳಿಸಬಹುದಾಗಿತ್ತು ಆದರೆ ಏನೂ ಹೇಳದೆ ಈರೀತಿ ಮಾಡುವುದು ಸರಿಯಲ್ಲ. ಇದರಿಂದ ಜನರ ಅಸಮಾಧಾನಕ್ಕೆ ಗುರಿಯಾಗಬೇಕಾಗುತ್ತದೆ ಎಂದರು.

ಈವೇಳೆ ಗ್ರಾ.ಪಂ.ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಗಂಗಮ್ಮ, ತಾ.ಪಂ.ಸದಸ್ಯೆ ಜಯಲಕ್ಷ್ಮಮ್ಮ ಸೇರಿದಂತೆ ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...