ಹುಳಿಯಾರು ಪಟ್ಟಣದ ಪೋಲೀಸ್ ಠಾಣೆಯಲ್ಲಿ ಪಿಎಸೈ ಬಿ.ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೪ನೇ ಜನ್ಮದಿನವನ್ನು ಆಚರಿಸಿದರು.
ಹುಳಿಯಾರಿನ ಪೋಲೀಸ್ ಠಾಣೆಯಲ್ಲಿ ಪಿಎಸೈ ಬಿ.ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೪ನೇ ಜನ್ಮದಿನವನ್ನು ಆಚರಿಸಲಾಯಿತು. |
ಈ ಸಂದರ್ಭದಲ್ಲಿ ಪಿಎಸೈ ಮಾತನಾಡಿ ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ಎದುರಾದ ಸಮಸ್ಯೆಗಳನ್ನು ಮೆಟ್ಟಿನಿಂತು ಯಶಸ್ಸು ಸಾಧಿಸಿದ್ದನ್ನು ತಿಳಿಸಿದರು. ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಈ ವೇಳೆ ಎ.ಎಸ್.ಐ ಗಳಾದ ಗಂಗಾಧರಯ್ಯ, ಶಿವಣ್ಣ,ರಾಜಣ್ಣ ಹಾಗೂ ಇತರ ಸಿಬ್ಬಂದಿಯವರು ಹಾಜರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ