ಬೆಂಕಿ ಹಚ್ಚಿಕೊಂಡು ಗಾಯಗೊಂಡಿದ್ದ ಮಾನಸಿಕ ಅಸ್ವಸ್ಥ ಮಂಗಳವಾರ ತಡರಾತ್ರಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಕುಶಾಲಪುರ(ಹಂದಿಗನಡು) ಗ್ರಾಮದ ಗುರುಮೂರ್ತಿ(35) ಎಂಬಾತ ಮೃತಪಟ್ಟ ದುರ್ದೈವಿಯಾಗಿದ್ದು, ಕಳೆದ ಬಹು ದಿನಗಳಿಂದ ಮಾನಸಿಕ ಅಸ್ವಸ್ಥಿಕೆಯಿಂದ ಬಳಲುತ್ತಿದ್ದ ಈತ ಕಳೆದ 19ರ ಭಾನುವಾರರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಗಾಯಗೊಂಡಿದ್ದನು. ಇದೇ ವೇಳೆ ಬೆಂಕಿಯ ಜ್ವಾಲೆಯೊಂದಿಗೆ ಗ್ರಾಮದಲ್ಲಿ ಸಂಚರಿಸಿ ಕೆಲ ಮಂದಿಗೆ ಗಾಯಗೊಳಿಸಿದ್ದ ಎನ್ನಲಾಗಿದೆ. ಪ್ರಕರಣ ಹುಳಿಯಾರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ