ಹುಳಿಯಾರು ಪಟ್ಟಣದ ಬಳ್ಳೇಕಟ್ಟೆ ಕ್ರಾಸ್ ಬಳಿ ಬೈಕ್ ಹಾಗೂ ಟಾಟಾ ಏಸ್ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಕಾಲು ಮುರಿದುಕೊಂಡ ಘಟನೆ ಶನಿವಾರ ಮಧ್ಯಾಹ್ನ ಘಟಿಸಿದೆ.
ಹೋಬಳಿಯ ದೊಡ್ಡಬಿದರೆ ಗ್ರಾಮದ ರಮೇಶ್ ಎಂಬಾತ ಹಾಗೂ ಆತನ ಸಂಬಂಧಿ ಅನಿತಾ ಎಂಬುವರು ಹುಳಿಯಾರಿನಿಂದ ವಾಪಸ್ಸ್ ಊರಿಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಹಸುವೊಂದು ಅಡ್ಡಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಬಿದ್ದಿದ್ದಾರೆ. ರಮೇಶ ಹಾಗೂ ಅನಿತಾ ಅವರನ್ನು ಪಟ್ಟಣದ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಹುಳಿಯಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ